ಮಂಗಳೂರು, ಡಿ.13: ಡಾ. ಪಿ ದಯಾನಂದ ಪೈ- ಪಿ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಮೈ ಭಾರತ್ ಪೋರ್ಟಲ್‌ನ ಸಾಮೂಹಿಕ ನೋಂದಣಿ ಕಾರ್ಯಕ್ರಮದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮೈ ಭಾರತ್ ಪೋರ್ಟಲ್‌ನ ಸಾಮೂಹಿಕ ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಡಿ. ಕಾರ್ತಿಗೇಯನ್, ಪ್ರಾದೇಶಿಕ ನಿರ್ದೇಶಕರು, ಪ್ರಾದೇಶಿಕ ನಿರ್ದೇಶನಾಲಯ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಭಾರತ ಸರಕಾರ ಇವರು ಮೈ ಭಾರತ್ ಎಂಬ ಪೋರ್ಟಲ್‌ನ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಇದರ ಉಪಯೋಗಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಈ ಪೋರ್ಟಲ್‌ಗೆ ಲಾಗಿನ್ ಆಗುವುದರ ಮೂಲಕ ದೇಶದ ಅಭಿವೃದ್ದಿಯಲ್ಲಿ ಯುವ ಜನಾಂಗ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರಾದ ಡಾ. ನಾಗರತ್ನ ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ನಾಯಕತ್ವ ಬಲಪಡಿಸುವಲ್ಲಿ ಸಮುದಾಯದ ಬೆಳವಣಿಗೆಯಲ್ಲಿ ಈ ಪೋರ್ಟಲ್ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ಅದರ ಸದುಪಯೋಗ ಪಡೆದು ಕೊಳ್ಳಬೇಕೆಂದು ಸೂಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ಮಾತಾನಾಡಿ, ವಿದ್ಯಾರ್ಥಿಗಳು ಈ ನೋಂದಣಿಯ ಪ್ರಾಮುಖ್ಯತೆಯನ್ನು ಅರಿತು ಸದುಪಯೋಗ ಪಡೆಯುವುದರೊಂದಿಗೆ ದೇಶದ ಪ್ರಗತಿಯ ಪಾಲುದಾರರಾಗಬೇಕು ಎಂದರು. ಶ್ರೀನಿವಾಸ ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಡಾ. ಲವೀನಾ ಉಪಸ್ಥಿತರಿದ್ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಭಾಗವಹಿಸಿದ್ದ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶಾಂತಿ ನಿರೂಪಿಸಿ, ಡಾ. ಮೋಹನ್‌ದಾಸ್ ಸ್ವಾಗತಿಸಿ, ಡಾ. ಲೋಕೇಶ್‌ನಾಥ್ ವಂದಿಸಿದರು.