ಉಡುಪಿ, ಡಿ.16: ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು 2024 ರ ಜನವರಿ 10 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ಡಿಸೆಂಬರ್ 16 ರ ಒಳಗೆ ಪರವಾನಿಗೆ ಕುರಿತು ಸ್ವೀಕರಿಸಿದ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದರೊಂದಿಗೆ ಸಾರ್ವಜನಿಕರಿಂದ ಸಾರಿಗೆ ವ್ಯವಸ್ಥೆ ಕುರಿತು ಕುಂದು ಕೊರತೆಗಳನ್ನು ಆಲಿಸಲಾಗುವುದು. ಸಂಬಂಧಪಟ್ಟ ಬಸ್ಸುಗಳ ಮಾಲಕರು ಸಭೆಗೆ ತಪ್ಪದೇ ಹಾಜರಾಗುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 10: ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ
ಜ. 10: ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ
Date: