Sunday, November 24, 2024
Sunday, November 24, 2024

ಉಡುಪಿ: ಸಭೆ, ಸಮಾರಂಭಗಳಲ್ಲಿ ಮರುಬಳಕೆಯ ವಸ್ತುಗಳನ್ನು ಬಳಸಲು ಸೂಚನೆ

ಉಡುಪಿ: ಸಭೆ, ಸಮಾರಂಭಗಳಲ್ಲಿ ಮರುಬಳಕೆಯ ವಸ್ತುಗಳನ್ನು ಬಳಸಲು ಸೂಚನೆ

Date:

ಉಡುಪಿ, ಡಿ.16: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್ ಹಾಗೂ ರೀಸೈಕಲ್ ಮಾದರಿಯಲ್ಲಿ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಬೇಕು ಹಾಗೂ ಪ್ರಸ್ತುತ ಬಳಸುತ್ತಿರುವ ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶ್ಯೂಗಳನ್ನು ಬಳಸಬಾರದು.

ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿಸಲು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು. ಉದ್ದಿಮೆದಾರರು, ವ್ಯಾಪಾರಸ್ಥರು, ಫಾಸ್ಟ್ ಫುಡ್ ಅಂಗಡಿಯವರು ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶೂಗಳನ್ನು ಡಿಸೆಂಬರ್ 31 ರ ಒಳಗೆ ಖಾಲಿ ಮಾಡಬೇಕು. ನಂತರ ಮಾರಾಟ ಮಾಡುವುದು ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!