Saturday, October 19, 2024
Saturday, October 19, 2024

ಕೇರಳದಲ್ಲಿ ಕೋವಿಡ್ ಸಬ್‌ವೇರಿಯಂಟ್ ಜೆ.ಎನ್.1 ಪ್ರಕರಣ ಪತ್ತೆ

ಕೇರಳದಲ್ಲಿ ಕೋವಿಡ್ ಸಬ್‌ವೇರಿಯಂಟ್ ಜೆ.ಎನ್.1 ಪ್ರಕರಣ ಪತ್ತೆ

Date:

ನವದೆಹಲಿ, ಡಿ.17: ಕೇರಳದಲ್ಲಿ ಕೋವಿಡ್‌ನ ಜೆ.ಎನ್.1 ಸಬ್‌ವೇರಿಯಂಟ್‌ನ ಪ್ರಕರಣ ಪತ್ತೆಯಾಗಿದ ಬೆನ್ನಲ್ಲೇ, ಕೇಂದ್ರ ಆರೋಗ್ಯ ಸಚಿವಾಲಯ ತುರ್ತು ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಮೂರು ತಿಂಗಳ ಹಿಂದೆ ಇದು ಭಾರತೀಯರಲ್ಲಿ ಪತ್ತೆಯಾಗಿದೆ. ಸಿಂಗಾಪುರ ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಯಿತು, ಇದು ಭಾರತದ ಇತರ ಭಾಗಗಳಲ್ಲಿಯೂ ಇದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸಚಿವಾಲಯವು ಕೇರಳ ಆರೋಗ್ಯ ಇಲಾಖೆಯೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಕೇರಳಕ್ಕೆ ಸಂಪರ್ಕ ಕಲ್ಪಿಸುವ ಕಡೆಗಳಲ್ಲಿ ಸೋಂಕಿನ ಹರಡುವಿಕೆಯನ್ನು ತಡೆಯುವ ಸಲುವಾಗಿ ಕಾರ್ಯಾಚರಣೆ ಆರಂಭವಾಗಿದೆ. ದೇಶಾದ್ಯಂತ ಒಂದೇ ದಿನ 339 ಮಂದಿ ಕೋವಿಡ್ ಸೋಂಕಿತರಾಗಿದ್ದಾರೆ. ದೇಶದಲ್ಲಿ ಒಟ್ಟು 1492 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಅಯ್ಯಪ್ಪ ಮಾಲಾಧಾರಿಗಳು ಎಚ್ಚರಿಕೆ ವಹಿಸಬೇಕು: ಶಬರಿಮಲೆ ಯಾತ್ರಾರ್ಥಿಗಳು ಅತ್ಯಧಿಕವಾಗಿರುವ ಈ ಸಂದರ್ಭದಲ್ಲಿ ಕೇರಳಕ್ಕೆ ಹೋಗುವವರು ಮತ್ತು ಅಲ್ಲಿಂದ ಹಿಂದಿರುಗುವವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಸೂಕ್ತ. ದೇಶದ ಮೂಲೆಮೂಲೆಗಳಿಂದ ಶಬರಿಮಲೆಗೆ ತೆರಳುವ ಮಾಲಾಧಾರಿಗಳು ಆದಷ್ಟು ಮಾಸ್ಕ್ ಧರಿಸುವುದು, ಕೈಗಳ ಶುಚಿತ್ವ ಕಾಪಾಡುವುದು, ಕೇರಳದಲ್ಲಿ ಹೈ ರಿಸ್ಕ್ ಇರುವ ಕಡೆಗಳಿಗೆ ಹೋಗದಿರುವುದು ಸೂಕ್ತ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!