ಕಲ್ಯಾಣಪುರ, ಡಿ.17: ಗೊರೆಟ್ಟಿ ಆಸ್ಪತ್ರೆ ಕಲ್ಯಾಣಪುರ, ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ (ಎಂ.ಎಸ್.ಡಬ್ಲ್ಯೂ) ವಿಭಾಗ, ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ, ಹದಿಹರೆಯದ ಆರೋಗ್ಯ ಮತ್ತು ನೈರ್ಮಲ್ಯ ಮಾಹಿತಿ ಕಾರ್ಯಾಗಾರ ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸ್ತ್ರೀರೋಗ ತಜ್ಞರಾದ ಡಾ. ರಾಜಲಕ್ಷ್ಮಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೌಢಾವಸ್ಥೆಯಲ್ಲಿ ಆಗುವ ಬದಲಾವಣೆಯ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅನಿತಾ ಡಿಸೋಜಾ ವಹಿಸಿದ್ದರು. ಗೊರೆಟ್ಟಿ ಆಸ್ಪತ್ರೆಯ ಸಮಾಜಕಾರ್ಯ ವಿಭಾಗ ಸಂಯೋಜಕರಾದ ರಾಕೇಶ್ ಉಪಸ್ಥಿತರಿದ್ದರು. ಸಮಾಜಕಾರ್ಯ ವಿದ್ಯಾರ್ಥಿನಿಯರಾದ ದೀಪಿಕಾ, ಸ್ಪಂದನ, ಲಕ್ಷ್ಮಿನ್ ಇದ್ದರು.