Tuesday, November 26, 2024
Tuesday, November 26, 2024

ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ

ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆಯ ಸಂಭ್ರಮ

Date:

ಉಡುಪಿ, ಡಿ.20: ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಡಿಸೆಂಬರ್ 19 ರ ಸಂಜೆ ಮಂಗಳವಾರದಿಂದ ಬುಧವಾರ ಮಧ್ಯಾಹ್ನದ ವರೆಗೆ ಮದುವೆ ಸಂಭ್ರಮದ ಕಳೆಯು ಕಟ್ಟಿತ್ತು. ಸಂಜೆ ಮೆಹಂದಿ ಕಾರ್ಯಕ್ರಮ ನಡೆದರೆ, ಬೆಳಗ್ಗೆ ಎರಡು ಜೋಡಿಗಳ ವಿವಾಹ ಮಹೋತ್ಸವವು ಅಧಿಕಾರಿಗಳು, ಗಣ್ಯರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನಡೆಯಿತು. ವಿವಾಹ ನಿಶ್ಚಯ ಕಾರ್ಯಕ್ರಮ ಜಿಲ್ಲಾಡಳಿತದ ನೇತೃತ್ವದಲ್ಲಿ ಕಳೆದ ಎರಡು ತಿಂಗಳಿನಿಂದ ವರರ ಆರೋಗ್ಯ, ನಡತೆ, ಅವರು ಗಳಿಸಿರುವ ಆದಾಯ, ನಡತೆ ಮತ್ತಿತರ ವಿವರಗಳನ್ನು ಕಲೆ ಹಾಕುವುದರೊಂದಿಗೆ ಜಿಲ್ಲಾಡಳಿತ, ವರನ ಗುರು ಹಿರಿಯರು ಒಪ್ಪಿಗೆ ನೀಡಿದರು. ತುಮಕೂರು ಮೂಲದ 32 ವರ್ಷ ಪ್ರಾಯದ ಶೀಲಾ ರವರು ಕಳೆದ 4 ವರ್ಷಗಳಿಂದ ಮಹಿಳಾ ನಿಲಯದಲ್ಲಿ ವಾಸವಿದ್ದು, ಅನಾಥೆಯಾದ ಇವರನ್ನು ಕುಂದಾಪುರ ತಾಲೂಕಿನ ಬೆದ್ರಾಡಿಯ ಮಹಾಬಲ ಶಾಸ್ತ್ರಿಯ ಸುಪುತ್ರರಾದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದ 43 ವರ್ಷದ ಗಣೇಶ್ ಶಾಸ್ತ್ರಿ ಅವರೊಂದಿಗೆ ಹಾಗೂ ಭದ್ರಾವತಿ ಮೂಲದ 21 ವರ್ಷ ಪ್ರಾಯದ ಕುಮಾರಿ ಅವರು ಕಳೆದ ಎರಡು ವರ್ಷಗಳಿಂದ ಮಹಿಳಾ ನಿಲಯದಲ್ಲಿ ವಾಸವಿದ್ದು, ಪೋಷಕರಿಲ್ಲದ ಇವರನ್ನು ಯಲ್ಲಾಪುರ ಮೂಲದ ನಂದೊಳ್ಳಿ ಅಣಲಗಾರದ ಹಾಲಿ ಬೆಳ್ಳಂಜೆಯಲ್ಲಿ ಪುರೋಹಿತ ಕೆಲಸ ನಿರ್ವಹಿಸುತ್ತಿರುವ 29 ವರ್ಷ ಪ್ರಾಯದ ಸತ್ಯನಾರಾಯಣ ಶ್ರೀಧರ ಭಟ್ಟ ಅವರೊಂದಿಗೆ ಮದುವೆ ನೆರವೇರಿತು.

ಮದುವೆ ಮುಹೂರ್ತದ ಶುಭ ಸಂದರ್ಭದಲ್ಲಿ ನವ ಜೋಡಿಗಳಿಗೆ ಧಾರೆ ಮುಹೂರ್ತದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್, ಹಿರಿಯ ಸಿವಿಲೆ ನ್ಯಾಯಾಧೀಶೆ ಶ್ಯಾಮಲಾ ಎಸ್., ಮಹಿಳಾ ನಿಲಯದ ಅಧೀಕ್ಷಕಿ ಪುಷ್ಪಾರಾಣಿ, ವಿವಿಧ ಮಹಿಳಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಸೇವಕರು ಸೇರಿದಂತೆ ಮತ್ತಿತರರು ಆಶೀರ್ವದಿಸಿದರು. ವಿವಾಹ ಸಂಭ್ರಮವು ಖಾಸಗಿ ಮದುವೆಗಿಂತ ಕಡಿಮೆ ಇಲ್ಲದಂತೆ ಮದುವೆ ಚಪ್ಪರ, ಸ್ವಾಗತ ದ್ವಾರ, ಮಹಿಳಾ ಮಣಿಗಳು ಬಂದವರನ್ನು ತಂಪು ಪಾನೀಯ ಹಾಗೂ ಗುಲಾಬಿ ಹೂ ನೀಡುವುದರೊಂದಿಗೆ ಆಮಂತ್ರಿತರನ್ನು ಸ್ವಾಗತಿಸುತ್ತಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಮ್ಮ ಕುಟುಂಬದ ಮದುವೆಯಲ್ಲಿ ಆಮಂತ್ರಿತರನ್ನು ಸ್ವಾಗತಿಸುವ ರೀತಿಯಲ್ಲಿ ಸ್ವಾಗತಿಸಿ, ನಗುನಗುತ್ತಾ ಪ್ರತಿಯೊಬ್ಬರನ್ನು ಮಾತನಾಡುತ್ತಿದ್ದರು. ಅರ್ಚಕರು ಶಾಸ್ತ್ರೀಕ್ತವಾಗಿ ಅಗ್ನಿ ಸಾಕ್ಷಿಯಾಗಿ ಮದುವೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರೆ, ಆಮಂತ್ರಿತರು ವಧು- ವರರಿಗೆ ಉಡುಗೊರೆಗಳನ್ನು ನೀಡುತ್ತಿರುವುದು ಸಹ ವಿಶೇ಼ವಾಗಿತ್ತು.

ನವಜೋಡಿಯೊಂದಿಗೆ ಫೋಟೋ ಸೆಷನ್‌ನಲ್ಲಿ ನಗುನಗುತ್ತಾ ಭಾಗವಹಿಸುತ್ತಿದ್ದರು. ಮಹಿಳಾ ನಿಲಯದ ಸಹಪಾಠಿಗಳ ಮುಖದಲ್ಲಿಯೂ ಸಹ ಉತ್ಸಾಹ, ಸಂತೋಷ ಮಡುಗಟ್ಟಿತ್ತು. ನವಜೋಡಿಗಳ ಮುಖದಲ್ಲಿಯೂ ಸಹ ಮನೋಲ್ಲಾಸ ಎದ್ದು ಕಾಣುತ್ತಿತ್ತು. ಬಂದ ಆಮಂತ್ರಿತರು ಲಾಡು, ಹೋಳಿಗೆ, ಊಟದ ರಸದೌತಣ ಸವಿದರು. ವರರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ ಕಳೆದ 2-3 ವರ್ಷಗಳಿಂದ ವಧುವಿನ ಅನ್ವೇಷಣೆಯಲ್ಲಿದ್ದು, ಸ್ನೇಹಿತರು ರಾಜ್ಯ ಮಹಿಳಾ ನಿಲಯದಲ್ಲಿ ಹೆಣ್ಣು ಮಕ್ಕಳು ಇರುವ ಬಗ್ಗೆ ತಿಳಿಸಿದಾಗ ನಾವು ಅಧಿಕಾರಿಗಳನ್ನು ಸಂಪರ್ಕಿಸಿ, ಅವರೊಂದಿಗೆ ವಿಶ್ವಾಸ ಗಳಿಸಿ, ಜಿಲ್ಲಾಡಳಿತ, ನಮ್ಮ ಗುರು-ಹಿರಿಯರು ಹಾಗೂ ವಧುವಿನ ಒಪ್ಪಿಗೆಯೊಂದಿಗೆ ಈ ಮದುವೆ ನಡೆಯಿತು. ಇದು ನನಗೆ ಸಂತೋಷದಾಯಕವಾದುದು. ಭವಿಷ್ಯದಲ್ಲಿ ಉತ್ತಮ ಜೀವನ ನಡೆಸುವುದಾಗಿ ತಿಳಿಸಿದರೆ, ವಧು ರವರು ಅಧಿಕಾರಿ ವರ್ಗದವರು ಮುಂದಿನ ದಿನಗಳಲ್ಲಿ ಉತ್ತಮ ಜೀವನ ನಡೆಸುವ ಉದ್ದೇಶದಿಂದ ನಮ್ಮ ಒಪ್ಪಿಗೆ, ನೀತಿ-ನಿಯಮಗಳ ಅನ್ವಯ ಸಂಗಾತಿಯನ್ನಾಗಿಸಿರುವುದು
ಮಗುಳುನಗೆಯ ನಾಚಿಕೆಯೊಂದಿಗೆ ಸಂತಸದಾಯಕ ಎಂದರು.

ಉಡುಪಿಯ ರಾಜ್ಯ ಮಹಿಳಾ ನಿಲಯವು 1976 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈವರೆಗೆ 24 ಮಹಿಳೆಯರ ವಿವಾಹವು ಈ ಸಂಸ್ಥೆಯಲ್ಲಿ ನಡೆದಿದೆ. ಪ್ರಸ್ತುತ 63 ಜನ ಮಹಿಳೆಯರು ಹಾಗೂ 5 ಜನ ಮಕ್ಕಳು ಇದ್ದಾರೆ. ಇವರಲ್ಲಿ ಮೂರು ಹೆಣ್ಣು ಮಕ್ಕಳು
ಕಾಲೇಜು ಶಿಕ್ಷಣವನ್ನು ಹೊಂದುತ್ತಿದ್ದರೆ, ಬಾಕಿ ಉಳಿದ ಮಹಿಳೆಯರು ಊದು ಬತ್ತಿ, ಮೇಣದ ಬತ್ತಿ ಸೇರಿದಂತೆ ಮತ್ತಿತರ ತಯಾರಿಕಾ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!