ಬ್ರಹ್ಮಾವರ, ಡಿ.21: ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಫಾರ್ ರಿಸರ್ಚ್’ ಎನ್ನುವ ವಿಷಯದ ಕುರಿತು ಉಪನ್ಯಾಸಕರಿಗಾಗಿ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ನಡೆಯಿತು. ಕಾಲೇಜಿನ ಶೈಕ್ಷಣಿಕ ಸಮಿತಿಯ ಮುಖ್ಯ ಸಲಹೆಗಾರರಾದ ಶೋಭಾ ಆರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಎನ್.ಐ.ಟಿ.ಕೆ. ಇಂಜಿನಿಯರಿಂಗ್ ಕಾಲೇಜು ಸುರತ್ಕಲ್ ಇಲ್ಲಿನ ಗಣಕ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಅಣ್ಣಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿಜ್ಞಾನ, ವಾಣಿಜ್ಯ, ಮಾನವಿಕ ಕ್ಷೇತ್ರಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಆಗುತ್ತಿರುವ ಹೊಸ ಬದಲಾವಣೆಗಳು ಮತ್ತು ಅವುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.
ಎನ್.ಐ.ಟಿ.ಕೆ ಸುರತ್ಕಲ್ ನ ಸಂಶೋಧನಾ ವಿದ್ಯಾರ್ಥಿ ಸಚಿನ್ ಡಿ.ಎನ್ ಸಂಶೋಧನೆಯಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಕೆಯ ಸಾಧ್ಯತೆಗಳನ್ನು ವಿವರಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಫರ್ಹೀನ್ ಸ್ವಾಗತಿಸಿ, ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಡಾ. ಮಧು ಎನ್.ಎಂ ವಂದಿಸಿದರು. ಸಂಶೋಧನೆ ಮತ್ತು ಅಭಿವೃದ್ಧಿ ಸಮಿತಿಯ ಸಂಚಾಲಕರಾದ ಡಾ. ಹೇಮಾ ಎಸ್ ಕೊಡದ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂಎಸಿ ಸಂಚಾಲಕರಾದ ವಿದ್ಯಾ ಪಿ ಉಪಸ್ಥಿತರಿದ್ದರು.