Monday, November 25, 2024
Monday, November 25, 2024

ಯೋಜನೆಗಳನ್ನು ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಯೋಜನೆಗಳನ್ನು ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಡಿ.21: ಸರಕಾರದಿಂದ ಅನುಷ್ಠಾನಗೊಳಿಸಲಾಗುವ ಹೊಸ ಯೋಜನೆಗಳನ್ನು ನಾಗರಿಕರಿಗೆ ಉತ್ತಮ ರೀತಿಯಲ್ಲಿ ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಸೇವಾಸಿಂಧು / ಗ್ರಾಮ ಒನ್ ಜಿಲ್ಲಾಧಿಕಾರಿಗಳ ಕಚೇರಿ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರದ ನಿರ್ವಾಹಕರಿಗೆ ನಡೆದ ಜಿಲ್ಲಾಮಟ್ಟದ ಕ್ರೀಡೋತ್ಸವ ‘ಗ್ರಾಮ ಒನ್ ಕ್ರೀಡಾ ಹಬ್ಬ -2023’ ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.

ಈಗಾಗಲೇ ಗ್ರಾಮ ಒನ್ ಕೇಂದ್ರಗಳ ಮೂಲಕ ನಾಗರಿಕರಿಗೆ ಯಶಸ್ವ್ವಿಯಾಗಿ ಸೇವೆ ಒದಗಿಸಲಾಗಿದೆ. ದಿನಂಪ್ರತಿ ಜಿಲ್ಲೆಯ ನಾಗರಿಕರಿಗೆ ಸರಕಾರಿ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳು ಸಕ್ರೀಯವಾಗಿ ಕ್ರೀಡೆಯಲ್ಲಿ ಭಾಗವಹಿಸಿ, ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಆರ್, ಬ್ರಹ್ಮಾವರ ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸೇವಾಸಿಂಧು /ಗ್ರಾಮ ಒನ್ ಇದರ ಜಿಲ್ಲಾ ಯೋಜನಾ ವ್ಯವಸ್ಥಾಪಕ ನವೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಗ್ರಾಮ ಒನ್ ಜಿಲ್ಲಾ ಸಂಯೋಜಕ ನಾಗೇಶ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!