ಉಡುಪಿ, ಡಿ. 27: ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ವಿಕಸಿತ ಭಾರತ ಯಾತ್ರೆಯ ಕಾರ್ಯಕ್ರಮವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ಲೀಡ್ ಬ್ಯಾಂಕ್ ಮ್ಯಾನೇಜರ್ ಪಿಂಜಾರ, ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಉಳ್ತೂರು, ಉಪಾಧ್ಯಕ್ಷೆ ಜ್ಯೋತಿ ದೇವಾಡಿಗ, ಕೆನರಾ ಬ್ಯಾಂಕ್ ಮ್ಯಾನೇಜರ್ ನಾಗರಾಜ್ ನಾಯಕ್, ಕೃಷಿ ವಿಜ್ಞಾನ ಕೇಂದ್ರದ ಡಾ.ಧನಂಜಯ್, ಡಿಡಿಎಮ್ ಸಂಗೀತ ಕೀರ್ತಿ, ಆಯುಷ್ಮಾನ್ ಆರೋಗ್ಯ ಮಿತ್ರ ಸುಜನ್ ಮಾಲಾ, ಅಂಚೆ ಮುಖ್ಯಸ್ಥರಾದ ರಾಮಚಂದ್ರ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವರಾದ ಶೋಭಾ ಕರಂದ್ಲಾಜೆಯವರ ಆಪ್ತ ಸಹಾಯಕರಾದ ಲೋಹಿತ್ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.