Friday, October 18, 2024
Friday, October 18, 2024

ಜಿಲ್ಲೆಯಲ್ಲಿ ಆದ್ಯತಾ ವಲಯಕ್ಕೆ 11057.6 ಕೋಟಿ ರೂ. ಸಾಲ ಯೋಜನೆ ಗುರಿ ನಿಗಧಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಜಿಲ್ಲೆಯಲ್ಲಿ ಆದ್ಯತಾ ವಲಯಕ್ಕೆ 11057.6 ಕೋಟಿ ರೂ. ಸಾಲ ಯೋಜನೆ ಗುರಿ ನಿಗಧಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಡಿ.27: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವತಿಯಿಂದ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ 11057.6 ಕೋಟಿ ರೂ. ಗಳನ್ನು ಆದ್ಯತಾ ವಲಯಕ್ಕೆ ಸಾಲ ಯೋಜನೆಯನ್ನು ನೀಡುವ ಗುರಿ ಹೊಂದಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಬಾರ್ಡ್ ವತಿಯಿಂದ ಹೊರತಂದಿರುವ ಪೊಟೆನ್ಶಿಯಲ್ ಲಿಂಕ್ಡ್ ಕ್ರೆಡಿಟ್ ಪ್ಲಾನ್ 2024-25 ನೇ ಸಾಲಿನ ಪುಸ್ತಕ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಜಿಲ್ಲೆಯ ಗ್ರಾಮೀಣ ಭಾಗದ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲು ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಲು ರಾಷ್ಟ್ರೀಯ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವತಿಯಿಂದ 2024-25 ನೇ ಸಾಲಿಗೆ 11057.6 ಕೋಟಿ ರೂ. ಸಾಲ ನೀಡಲು ಉದ್ದೇಶಿಸಿದ್ದು, ಇದರಲ್ಲಿ ಶೇ. 48.30 ಯಷ್ಟು ಕೃಷಿ ಚಟುವಟಿಕೆಗಳಿಗೆ ಸಾಲ ನೀಡಲು ಮೀಸಲಿರಿಸಿದರೆ, ಸೂಕ್ಷ್ಮ ಮತ್ತು ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ಶೇ.33.30 ರಷ್ಟು, ವಸತಿ ಯೋಜನೆಗೆ ಶೇ.7.35 ರಷ್ಟು ಶಿಕ್ಷಣಕ್ಕೆ ಶೇ. 1.25 ರಷ್ಟು, ಆದ್ಯತಾ ವಲಯಕ್ಕೆ ಶೇ. 5.75 ರಷ್ಟು, ಸಾಮಾಜಿಕ ಅಭಿವೃದ್ಧಿಗೆ ಶೇ. 0.80 ರಷ್ಟು, ರಫ್ತು ಸಾಲ ಶೇ. 2.75 ರಷ್ಟು, ವಲಯವಾರು ಸಾಲದ ಪ್ರಮಾಣ ಅಂದಾಜು ಪಡಿಸಿದೆ ಎಂದರು. ನಬಾರ್ಡ್ ಗ್ರಾಮೀಣ ಜನತೆಗೆ ಸಮೃದ್ಧ ಹಾಗೂ ಸುಸ್ಥಿರ ಜೀವನವನ್ನು ನಡೆಸಲು ಅವಕಾಶವನ್ನು ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ನಬಾರ್ಡ್ ಬ್ಯಾಂಕ್ ಸಂಗೀತಾ ಕಾರ್ಥಾ, ಕರ್ನಾಟಕ ಬ್ಯಾಂಕ್‌ನ ರೀಜನಲ್ ಮ್ಯಾನೆಜರ್ ರಾಜಗೋಪಾಲನ್, ಎಸ್.ಬಿ.ಐ ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಶೀಬಾ ಸೆಹೆಜಾನ್, ಶೋಭಲತಾ, ರಾಜ್ ಗೋಪಾಲ್, ಯೂನಿಯನ್ ಬ್ಯಾಂಕ್‌ನ ಡಿ.ಆರ್.ಎಮ್ ಶಿವಕುಮಾರ್, ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್ ಪಿ.ಎಂ. ಪಿಂಜಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!