Tuesday, November 26, 2024
Tuesday, November 26, 2024

ಡಿ.30: ಅಜ್ಜರಕಾಡಿನಲ್ಲಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ

ಡಿ.30: ಅಜ್ಜರಕಾಡಿನಲ್ಲಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ

Date:

ಉಡುಪಿ, ಡಿ.28: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಜನಪರ ಉತ್ಸವ – ವಿಶೇಷ ಘಟಕ ಯೋಜನೆಯಡಿ ಸಾಂಸ್ಕೃತಿಕ ಕಾರ್ಯಕ್ರಮವು ಡಿಸೆಂಬರ್ 30 ರಂದು ಸಂಜೆ 5.30 ಕ್ಕೆ ನಗರದ ಅಜ್ಜರಕಾಡು ಭುಜಂಗ ಪಾರ್ಕ್ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು, ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್ ಮತ್ತು ಅಮೃತಾ ಕೃಷ್ಣಮೂರ್ತಿ, ಪೌರಾಯುಕ್ತ ರಾಯಪ್ಪ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಸಂಜೆ 5 ಗಂಟೆಗೆ ಉಡುಪಿಯ ಜೋಡುಕಟ್ಟೆಯಿಂದ ಭುಜಂಗ ಪಾರ್ಕ್ ವರೆಗೆ ಜನಪದ ತಂಡಗಳ ಮೆರವಣಿಗೆ ನಡೆಯಲಿದ್ದು, ನಂತರ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕಲಾವಿದರಿಂದ ಸುಗಮ ಸಂಗೀತ, ಕಂಸಾಳೆ, ಪೂಜಾ ಕುಣಿತ, ಚಿಲಿಪಿಲಿ ಗೊಂಬೆ, ವೀರಗಾಸೆ, ತಮಟೆ ವಾದನ, ಕಂಗೀಲು, ಹಾಲಕ್ಕಿ ಸುಗ್ಗಿ ಕುಣಿತ, ಕೊಂಬು ಕಹಳೆ, ಚೆನ್ನು ಕುಣಿತ, ಡೊಳ್ಳುಕುಣಿತ, ಚಂಡೆವಾದನ, ಗೊರವರ ಕುಣಿತ, ಮಹಿಳಾ ಡೊಳ್ಳು, ಚಿಟ್ಟಿ ಮೇಳ, ಕರಗ ಕೋಲಾಟ, ಕಹಳೆ ವಾದನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!