Saturday, October 19, 2024
Saturday, October 19, 2024

ವಂದೇ ಭಾರತ್ ರೈಲಿಗೆ ಉಡುಪಿಯಲ್ಲಿ ಡಿ. 30 ರಂದು ಅದ್ದೂರಿ ಸ್ವಾಗತ: ಯಶ್ಪಾಲ್ ಸುವರ್ಣ

ವಂದೇ ಭಾರತ್ ರೈಲಿಗೆ ಉಡುಪಿಯಲ್ಲಿ ಡಿ. 30 ರಂದು ಅದ್ದೂರಿ ಸ್ವಾಗತ: ಯಶ್ಪಾಲ್ ಸುವರ್ಣ

Date:

ಉಡುಪಿ, ಡಿ.28: ಕರಾವಳಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ನೇತತ್ವದ ಕೇಂದ್ರ ಸರಕಾರ ಕೊಡುಗೆಯಾಗಿ ನೀಡಿರುವ ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಥಮ ಪ್ರಯಾಣ ಹಿನ್ನೆಲೆಯಲ್ಲಿ ಡಿಸೆಂಬರ್ 30 ರಂದು ಉಡುಪಿಯಲ್ಲಿ ಅದ್ದೂರಿ ಸ್ವಾಗತ ಸಮಾರಂಭ ಆಯೋಜಿಸಿರುವುದಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಕರಾವಳಿ ಭಾಗದ ಬಹುದಿನಗಳ ಬೇಡಿಕೆಯಾಗಿದ್ದ ವಂದೇ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಆಗಿ ಚಾಲನೆ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಯವರ ಉಪಸ್ಥಿತಿಯಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಲಿದೆ.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಜೂರುಗೊಳಿಸುವ ಮೂಲಕ ಕರಾವಳಿ ಜಿಲ್ಲೆಯ ಪ್ರವಾಸೋದ್ಯಮ, ಮೀನುಗಾರಿಕೆ, ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ವಿಶೇಷ ಮುತುವರ್ಜಿ ವಹಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ನಳಿನ್ ಕುಮಾರ್ ಕಟೀಲ್, ಬಿ. ವೈ. ರಾಘವೇಂದ್ರ, ಅನಂತ್ ಕುಮಾರ್ ಹೆಗಡೆ ಯವರಿಗೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!