ಉಡುಪಿ, ಡಿ.31: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ರೋಟರಿ ಸಮುದಾಯದಳ ಕೆಮ್ಮಣ್ಣು – ನಿಟ್ಟೆ, ಜೇಸಿಐ ಬೆಳ್ಮಣ್ಣು ಮತ್ತು ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಮತ್ತು ಸ್ವಚ್ಚತೆ ಬಗ್ಗೆ ಮಾಹಿತಿ ಹಾಗೂ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮ ಜರಗಿತು.
ನಿಟ್ಟೆ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದ ನಿವೃತ್ತ ಆರೋಗ್ಯ ಸಹಾಯಕಿ ಸುಭಾಷಿನಿ ಅವರು ಹದಿಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಅತಿಥಿಯಾಗಿ ಪ್ರಥ್ವೀರಾಜ್ ಬಲ್ಲಾಳ್, ನಿಟ್ಟೆ ಕೆಮ್ಮಣ್ಣು ರೋಟರಿ ಸಮುದಾಯದಳದ ಅಧ್ಯಕ್ಷರಾದ ಪ್ರದೀಪ್ ಸುವರ್ಣ, ಬೆಳ್ಮಣ್ಣು ಜೇಸಿಐ ಅಧ್ಯಕ್ಷೆ ಸರಿತಾ ದಿನೇಶ್ ಸುವರ್ಣ, ನಿಕಟ ಪೂರ್ವಾಧ್ಯಕ್ಷ ಸತೀಶ್ ಪೂಜಾರಿ, ಕೆದಿಂಜೆ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೋಳ ಉದಯ ಅಂಚನ್, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತಿರಿದ್ದರು.