Friday, October 18, 2024
Friday, October 18, 2024

ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಮಾರಾಟ

ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಮಾರಾಟ

Date:

ಉಡುಪಿ, ಜ.1: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ 2024 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಪುಸ್ತಕ ಪ್ರಿಯರು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ದೂ. ಸಂಖ್ಯೆ: 080-22107705, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ http://www.kannadapustakapradhikara.com (ನಮ್ಮ ಪ್ರಕಟಣೆಗಳು ವಿಭಾಗ) ನಲ್ಲಿ ಕೂಡ ಶೇ.50 ರ ರಿಯಾಯಿತಿ ಸೌಲಭ್ಯ ಲಭ್ಯವಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!