ಬೆಂಗಳೂರು, ಜ.4: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎರಡನೇ ಟರ್ಮಿನಲ್ ನಿಂದ ಕೆ.ಎಸ್.ಆರ್.ಟಿ.ಸಿ- ಬಿ.ಎಮ್.ಟಿ.ಸಿ ನಿಗಮದ ಫ್ಲೈಬಸ್, ವಾಯುವಜ್ರ ಬಸ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಚಾಲನೆ ನೀಡಿ ನೂತನ ಸಹಾಯ ಕೇಂದ್ರವನ್ನು ಉದ್ಘಾಟಿಸಿದರು. ಪ್ರಸ್ತುತ ವಿಮಾನ ನಿಲ್ದಾಣದಿಂದ ಕ.ರಾ.ರ.ಸಾ.ನಿಗಮದ ಒಟ್ಟು 13 ಫ್ಲೈಬಸ್ ಸೇವೆಗಳನ್ನು 42 ಟ್ರಿಪ್‌ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಸಂಚಾರಗೊಳಿಸಲಾಗುತ್ತಿದೆ. ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಸುಸಜ್ಜಿತ ನೀರಿನ, ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದ್ದು ವಾಹನಗಳ ಕಾರ್ಯಾಚರಣೆಯ ಸಮಯ, ಡಿಜಿಟಲ್ ಫಲಕಗಳು, ಸಾರ್ವಜನಿಕ ಉದ್ಘೋಶಣ ವ್ಯವಸ್ಥೆ ಕಲ್ಪಿಸಲಾಗಿದ್ದು 40 ಸಿಬ್ಬಂದಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸಚಿವರಾದ ಕೆ.ಹೆಚ್.ಮುನಿಯಪ್ಪ, ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ. ಜಿ., ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಪ್ರಕಾಶ್, ಸತ್ಯಕಿ ರಘುನಾಥ್, ಶಾಲಿನಿ ರಾವ್ ಮತ್ತು ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಇಲಾಖೆ ಮುಖ್ಯಸ್ಥರು ಉಪಸ್ಥಿತರಿದ್ದರು.