Saturday, October 19, 2024
Saturday, October 19, 2024

ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ

ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ

Date:

ಮಂಗಳೂರು, ಜ.5: ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಖುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿ ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992 ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್.ಇ.ಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು. ಆ ಬಳಿಕ ನಮೋ ಬ್ರಿಗೇಡ್ ರಾಜ್ಯ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆ ಕರಸೇವಕರ ಹೋರಾಟಗಳ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ಸನ್ಮಾನ ಸ್ವೀಕರಿಸಿದ ಕರಸೇವಕರು ಮೆಚ್ಚುಗೆಯನ್ನು ಸೂಚಿಸಿದರು.

ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ. ಪಿ ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು. ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿರ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಮುಂತಾದವರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!