ಕುಂದಾಪುರ, ಜ.6: ಕರಾವಳಿ ಭಾಗದ ಪ್ರವಾಸಿ ತಾಣವಾಗಿ ಮಾರ್ಪಟ್ಟ ಕೋಡಿ ಸೀವಾಕ್ ಗೆ ಕುಂದಾಪುರ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಶನಿವಾರ ಭೇಟಿ ನೀಡಿದರು. ಸಾರ್ವಜನಿಕರ ದೂರಿನ ಮೇಲೆ ಸೂಕ್ತ ಶೌಚಾಲಯದ ಸ್ಥಳ ಗುರುತಿಸುವ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ಪುರಸಭೆಯ ಮುಖ್ಯ ಅಧಿಕಾರಿ, ಹಾಗೂ ಆರೋಗ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಪರಿಶೀಲನೆ ಬಗ್ಗೆ ಚರ್ಚೆ ನಡೆಸಿದರು.
ಪುರಸಭಾ ಮಾಜಿ ಉಪಾಧ್ಯಕ್ಷರಾದ ನಾಗರಾಜ್ ಕಾಂಚನ್, ಮಾಜಿ ಸದಸ್ಯರಾದ ಸಂದೀಪ್ ಪೂಜಾರಿ, ಪುರಸಭೆಯ ಸದಸ್ಯರಾದ ಸಂತೋಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.