ಉಡುಪಿ, ಜ.6: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಶನಿವಾರ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಶಾಸಕರಾದ ಭೈರತಿ ಬಸವರಾಜ್, ಮುನಿರಾಜು, ಕಾಪು ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ, ಕುಂದಾಪುರ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯಾಲಯ ಪ್ರಧಾನ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್ ಮುಂತಾದವರು ಉಪಸ್ಥಿತರಿದ್ದರು.