ಮಣಿಪಾಲ, ಜ.10: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರನ್ನು ಒಟ್ಟುಗೂಡಿಸಿದ ಮೂರು ದಿನಗಳ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕಸ್ತೂರ್ಬಾ ಹಾಸ್ಪಿಟಲ್ ಕಾರ್ಪೊರೇಟ್ ಕ್ರಿಕೆಟ್ ಲೀಗ್ ಸಂಪನ್ನಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಭಾಗವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಪ್ರತಿಷ್ಠಿತ ಕಸ್ತೂರ್ಬಾ ಹಾಸ್ಪಿಟಲ್ ಕ್ರಿಕೆಟ್ ಲೀಗ್ ಟ್ರೋಫಿಯನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ತಂಡ ಪಡೆದುಕೊಂಡಿತು.
ಟೀಮ್ ಎಜೆ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿತು. ಸಮಾರಂಭದಲ್ಲಿ ವೈಯಕ್ತಿಕ ಪ್ರಶಸ್ತಿಗಳನ್ನು ಸಹ ನೀಡಿ ಗೌರವಿಸಲಾಯಿತು. ಅವಿನಾಶ್ ಸರಣಿ ಶ್ರೇಷ್ಠ ಗೌರವವನ್ನು ಪಡೆದರು. ಗಣೇಶ್ ಅವರು ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಗುರುತಿಸಲ್ಪಟ್ಟರು ಮತ್ತು ಶರೀಫ್ ಅತ್ಯುತ್ತಮ ಬೌಲಿಂಗ್ ಕೌಶಲ್ಯಕ್ಕಾಗಿ ಪ್ರಶಸ್ತಿಗಳನ್ನು ಪಡೆದರು.
ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಅವಿನಾಶ್ ಶೆಟ್ಟಿ, ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್ ಮತ್ತು ಇತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.