Monday, November 25, 2024
Monday, November 25, 2024

ಉಡುಪಿ: ಮತ್ಸ್ಯಾಶ್ರಯ ಯೋಜನೆಯಡಿ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ: ಮತ್ಸ್ಯಾಶ್ರಯ ಯೋಜನೆಯಡಿ ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Date:

ಉಡುಪಿ, ಜ.11: ಮೀನುಗಾರಿಕೆ ಇಲಾಖೆಯ 2022-23 ನೇ ಸಾಲಿನಲ್ಲಿ ಮತ್ಸ್ಯಾಶ್ರಯ ಯೋಜನೆಯಡಿ ನಿರ್ವಸತಿ ಮೀನುಗಾರರಿಗೆ ವಸತಿ ಕಲ್ಪಿಸಲು ಬಿ.ಪಿ.ಎಲ್ ಅಥವಾ ಆರ್ಥಿಕವಾಗಿ ಹಿಂದುಳಿದ, ಸ್ವಂತ ನಿವೇಶನ ಹೊಂದಿರುವ, ಹುಟ್ಟಿನಿಂದ ಅಥವಾ ವೃತ್ತಿಯಲ್ಲಿ ಮೀನುಗಾರರಾಗಿರುವ, ವಿವಾಹಿತ, ವಿಧವೆ, ವಿಧುರ ಹಾಗೂ ಮೀನುಗಾರ ಸಹಕಾರಿ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ಒಟ್ಟು 98 (ಸಾಮಾನ್ಯ-74, ಪ.ಜಾ-17,ಪ.ಪಂ-7) ಗುರಿಗಳನ್ನು ಸರ್ಕಾರದ ಆದೇಶದಂತೆ ನಿಗಧಿ ಪಡಿಸಿದ್ದು, ಈಗಾಗಲೇ ಒಟ್ಟು 47(ಸಾಮಾನ್ಯ -43, ಪ.ಜಾ-1, ಪ.ಪಂ-3)ಅರ್ಜಿಗಳು ಸ್ವೀಕೃತವಾಗಿದ್ದು, ಉಳಿದ 51 (ಸಾಮಾನ್ಯ-31, ಪ.ಜಾ-16, ಪ.ಪಂ-4) ಗುರಿಗಳಿಗೆ ಅರ್ಜಿ ಸಲ್ಲಿಸುವವರು ಆಯ್ಕೆ ಸಮಿತಿ ಅಧ್ಯಕ್ಷರ ಶಿಫಾರಸ್ಸು ಪತ್ರದೊಂದಿಗೆ ಪೂರಕ ದಾಖಲೆಗಳನ್ನು ಉಡುಪಿಯ ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!