ಮಣಿಪಾಲ, ಜ.16: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ, ಕ್ಷಯರೋಗ ಕುರಿತು ಮಾಹಿತಿ ಹೊಂದಿರುವ ಪ್ರಸಕ್ತ ಸಾಲಿನ ಕ್ಯಾಲೆಂಡರ್ ಹಾಗೂ ಡೈರಿಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾಧ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ. ರಾಮರಾವ್, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಡಾ. ಜೋಶ್ನಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕ್ಷಯರೋಗ ಮಾಹಿತಿ ಹೊಂದಿರುವ ಕ್ಯಾಲೆಂಡರ್, ಡೈರಿ ಬಿಡುಗಡೆ
ಕ್ಷಯರೋಗ ಮಾಹಿತಿ ಹೊಂದಿರುವ ಕ್ಯಾಲೆಂಡರ್, ಡೈರಿ ಬಿಡುಗಡೆ
Date: