ಕಾಪು, ಜ.23: ಕಾಪು ಮಂಡಲ ಯುವ ಮೋರ್ಚಾ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ಆಯೋಜಿಸಲಾದ ‘2024 ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಚಾಲನೆ ನೀಡಿದರು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ನವೀನ್ ಎಸ್.ಕೆ, ಸುಧಾಮ ಶೆಟ್ಟಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಪುರಸಭಾ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ, ಸುರೇಶ್ ದೇವಾಡಿಗ, ಮುರಳೀಧರ್ ಪೈ, ಹೈದರ್ ಆಲಿ, ಗೌರಿ ಪೂಜಾರಿ, ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳಾದ ಸೋನು ಪಾಂಗಾಳ, ಪ್ರಕಾಶ್ ಆಚಾರ್ಯ, ರಾಜ್ ಪಡುಬಿದ್ರಿ, ಪ್ರವೀಣ್ ಕಾಪು, ಧೀರೇಶ್ ಮೂಳೂರು ಮುಂತಾದವರು ಉಪಸ್ಥಿತರಿದ್ದರು.