ಯಾದಗಿರಿ, ಜ.28: ಯಾದಗಿರಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಭದ ಉದ್ಘಾಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ನೆರವೇರಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ ಆಡಳಿತವನ್ನು ಜನರ ಮುಂದಿಟ್ಟು, ಸದೃಢ ಹಾಗೂ ಸಮರ್ಥ ಭಾರತ ನಿರ್ಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯರ ಗ್ಯಾರಂಟಿಯಾಗಿದ್ದು ಪ್ರತಿ ಮನೆಗಳಲ್ಲಿಯೂ ಒಂದಿಲ್ಲೊಂದು ಯೋಜನೆಯ ಫಲಾನುಭವಿಗಳಾಗಿದ್ದು, ಮಗದೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಹಗಲಿರುಳೆನ್ನದೇ ಶ್ರಮಿಸುವ ಸಂಕಲ್ಪ ಮಾಡಬೇಕು ಎಂದರು.
ರಾಜ್ಯ ಉಪಾಧ್ಯಕ್ಷರಾದ ರಾಜುಗೌಡ, ಸಂಸದರಾದ ಅಮರೇಶ್ವರ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಾಸಕರು ಹಾಗೂ ರಾಜ್ಯ ಕಾರ್ಯದರ್ಶಿ ಬಸವರಾಜ ಮತ್ತೀಮಡು, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್, ವೆಂಕಟರೆಡ್ಡಿ ಮುದ್ದನಾಳ್, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳೀಕೆರೆ, ಲಲಿತಾ ಅನಾಪುರ, ನೂತನ ಜಿಲ್ಲಾಧ್ಯಕ್ಷರಾದ ಅಮೀನ್ ರೆಡ್ಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಡಾ. ಶರಣಭೋಪಾಲ್ ರೆಡ್ಡಿ, ಡಾ.ಚಂದ್ರಶೇಖರ್ ಸುಬೇದಾರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.