ತುಮಕೂರು, ಜ.30: ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು ವಿತರಿಸಿ, 697 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಜಾರಿಯಾಗಲ್ಲ, ಸರ್ಕಾರದಲ್ಲಿ ಹಣ ಇಲ್ಲ ಎಂದು ಸುಳ್ಳೋತ್ಪಾದಿಕರಿಗೆ ಈ ಕಾರ್ಯಕ್ರಮವೇ ಒಂದು ಉತ್ತರ. ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಈ ಯೋಜನೆಗಳ ಫಲಾನುಭವಿಗಳು ಸುಳ್ಳೋತ್ಪಾದಕರ ಮುಖಕ್ಕೆ ಸರಿಯಾಗಿ ಉತ್ತರ ನೀಡಬೇಕು. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಅಭಿವೃದ್ಧಿ ಕಾರ್ಯಗಳನ್ನೂ ಕೈಗೆತ್ತಿಕೊಂಡಿದ್ದೇವೆ. 2013-18ರ ವರೆಗೆ ನಾವು ಕೊಟ್ಟ ಎಲ್ಲಾ ಭರವಸೆಗಳನ್ನೂ ಈಡೇರಿಸಿದ್ದೇವೆ. ಈ ಬಾರಿ ಚುನಾವಣೆ ವೇಳೆಯಲ್ಲಿ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು 8 ತಿಂಗಳ ಒಳಗೆ ಜಾರಿಗೆ ಮಾಡಿದ್ದೇವೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವರಾದ ಡಾ. ಜಿ. ಪಾರ್ಮೇಶ್ವರ, ಸಚಿವರುಗಳಾದ ಕೆ.ಎನ್.ರಾಜಣ್ಣ, ಕೃಷ್ಣ ಭೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರುಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.