ಉಡುಪಿ, ಫೆ.3: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸಲು ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೇಸ್ಟರ್ ಹಬ್ಗಳನ್ನು ಹಂತಹಂತವಾಗಿ ಸ್ಥಾಪಿಸುವ ಸಲುವಾಗಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಯಂತ್ರೋಪಕರಣ: ಸಹಾಯಧನಕ್ಕೆ ಅರ್ಜಿ ಆಹ್ವಾನ
ಕೃಷಿ ಯಂತ್ರೋಪಕರಣ: ಸಹಾಯಧನಕ್ಕೆ ಅರ್ಜಿ ಆಹ್ವಾನ
Date: