Friday, October 18, 2024
Friday, October 18, 2024

ಜ್ಞಾನಸುಧಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ ಹೊಯ್ಸಳ-ಕೆಳದಿ ಚೆನ್ನಮ್ಮ ಜಿಲ್ಲಾ ಪ್ರಶಸ್ತಿ

ಜ್ಞಾನಸುಧಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ ಹೊಯ್ಸಳ-ಕೆಳದಿ ಚೆನ್ನಮ್ಮ ಜಿಲ್ಲಾ ಪ್ರಶಸ್ತಿ

Date:

ಉಡುಪಿ, ಫೆ.5: 2023-24ನೇ ಸಾಲಿನ ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಕೊಡಮಾಡುವ ಜಿಲ್ಲಾಮಟ್ಟದ ಪ್ರಶಸ್ತಿಯಲ್ಲಿ ಕ್ರೀಡಾ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರಣಯ್ ಶೆಟ್ಟಿ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಅನ್ವಿ ಎಚ್ ಅಂಚನ್‌ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಇವರು ಪ್ರಶಸ್ತಿ ಸಹಿತ ಹತ್ತು ಸಾವಿರ ನಗದು ಪುರಸ್ಕಾರದೊಂದಿಗೆ ಅಭಿನಂದನಾ ಸ್ಮರಣಿಕೆಯನ್ನು ಪಡೆದಿರುತ್ತಾರೆ. ಪ್ರಣಯ್ ಇವರು ಪ್ರಶಾಂತ್ ಶೆಟ್ಟಿ ಮತ್ತು ಸಾರಿಕಾ ಶೆಟ್ಟಿಯವರ ಪುತ್ರ. ಅನ್ವಿ. ಎಚ್. ಅಂಚನ್ ಹರೀಶ್ ಅಂಚನ್ ಹಾಗೂ ಶೋಭಾ ದಂಪತಿಗಳ ಪುತ್ರಿ. ಇವರಿಬ್ಬರ ಸಾಧನೆಗಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...
error: Content is protected !!