ಉಡುಪಿ, ಫೆ.7: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಫೆಬ್ರವರಿ 9 ಮತ್ತು 10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ. 9 ರಂದು ರಾತ್ರಿ 9 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಫೆ. 10 ರಂದು ಬೆಳಗ್ಗೆ 10 ಗಂಟೆಗೆ ಕುಂದಾಪುರದ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್ ರೀಚ್ ಸರ್ವೀಸ್ ಸೆಂಟರ್ ಹಾಗೂ ನೂತನ ಡಯಾಲಿಸಿಸ್ ಘಟಕದ ಉದ್ಘಾಟನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಕೋಟೆಶ್ವರದ ಸಹನಾ ಕನ್ವೆನ್ಷನ್ ಸೆಂಟರ್ನಲ್ಲಿ ಖಾಸಗಿ ಕಾರ್ಯಕ್ರಮ. ಮಧ್ಯಾಹ್ನ 1 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಕೆ.ಎಫ್.ಡಿ ಬಾದಿತ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ, ಮ. 2 ಗಂಟೆಗೆ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಡಯಾಲಿಸೀಸ್ ಘಟಕಗಳ ಲೋಕಾರ್ಪಣೆ, 2.30 ಕ್ಕೆ ಉಡುಪಿ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.