ನವದೆಹಲಿ, ಫೆ. 8: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕನಿಷ್ಠ 40 ಸ್ಥಾನಗಳನ್ನು ಸಿಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ಸಂದರ್ಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ, ನಾಯಕ ಮತ್ತು ನೀತಿಗೆ ಯಾವುದೇ ಗ್ಯಾರಂಟಿ ಇಲ್ಲದ ಕಾಂಗ್ರೆಸ್ ನೀತಿಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿ ಅವರ ಭಾಷಣವು ಭಾರತದ ಸಾಮರ್ಥ್ಯ, ಶಕ್ತಿ ಮತ್ತು ಉಜ್ವಲ ಭವಿಷ್ಯವನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಿ ಹೇಳಿದರು.
ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಅನುಮಾನ ಎಂದು ಈ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದರು. ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದರು. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗಳಿಸಬಹುದೇ ಎಂಬ ಅನುಮಾನವಿದೆ ಎಂದು ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿತ್ತು.