ಉಡುಪಿ, ಫೆ.12: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀವತ್ಸ ಪಿ ಹಾಗೂ ಶ್ರಾವ್ಯ ಹೆಚ್. ಆರ್ ಇವರು ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಿ.ಎ ಇಂಟರ್ ಮೀಡಿಯೆಟ್ ಹಂತಕ್ಕೆ ಅರ್ಹತೆ ಗಳಿಸಿದ್ದಾರೆ. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಅಂಗಸಂಸ್ಥೆಯಾದ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಲಕ್ಷ್ಮೀ ಸಿ. ವಿ, ಸುಪ್ರಸಿದ್ಧ್ ಕಾಂತ್, ವರುಣ್ ಬಿ. ಆರ್ ಕೂಡಾ ಮೊದಲ ಹಂತದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸಿ.ಎ ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ.
ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಥಮ ಪಿಯುಸಿಯಿಂದಲೇ ವಿಶೇಷ ತರಬೇತಿಯನ್ನು ನಿರಂತರವಾಗಿ ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ಉಪನ್ಯಾಸಕರಿಂದ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.