ತಲ್ಲೂರು, ಫೆ. 13: ತಲ್ಲೂರು ಗ್ರಾಮ ಪಂಚಾಯತ್ ವಠಾರದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ, ಗ್ರಾಮ ಪಂಚಾಯತ್ ತಲ್ಲೂರು, ಹಾಗೂ ಮಹಾಮಾಯಿ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ತಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಸಂಜೀವಿನಿ ಮಾಸಿಕ ಸಂತೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಿರೀಶ್ ಎಸ್ ನಾಯಕ್ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಇಂದು ಸಂಜೀವಿನಿ ಗುಂಪುಗಳ ಮೂಲಕ ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಡುತ್ತಿದ್ದು ಹಲವಾರು ಮಹಿಳೆಯರು ಸ್ಥಳೀಯವಾಗಿ ಹಲವಾರು ಉತ್ಪನ್ನಗಳನ್ನು ಉತ್ಪಾದಿಸುತ್ತಿದ್ದು, ಅವರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲ. ಇಂತಹ ಸಮಯದಲ್ಲಿ ಸರಕಾರ ಸಂಜೀವಿನಿ ಮಾಸಿಕ ಸಂತೆಯ ಮೂಲಕ ಮಹಿಳೆಯರು ಸ್ಥಳೀಯವಾಗಿ ಉತ್ಪಾದಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಮತ್ತು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ. ಸಂಜೀವಿನಿ ಯೋಜನೆ ಮಹಿಳೆಯರ ಪಾಲಿಗೆ ಸಂಜೀವಿನಿಯಂತೆ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆ ಇನ್ನಷ್ಟು ಗ್ರಾಮೀಣ ಭಾಗದ ಮಹಿಳೆಯರಿಗೆ ತಲುಪಲಿ ಎಂದರು.
ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಉದಯ ಕುಮಾರ್ ತಲ್ಲೂರು ಮಾತನಾಡಿ, ತಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿನೂತನ ಕಾರ್ಯಕ್ರಮ ಆಯೋಜಿಸಿದ್ದು ಗ್ರಾಮದ ನಾಗರಿಕರು ಸರಕಾರದ ಈ ಕಾರ್ಯಕ್ರಮವನ್ನು ತುಂಬು ಹೃದಯದಿಂದ ಸ್ವಾಗತಿಸಿ ಸಂಜೀವಿನಿ ಮಹಿಳೆಯರು ಸ್ಥಳೀಯವಾಗಿ ಉತ್ಪಾದಿಸಿದ ಉತ್ಪನ್ನಗಳಿಗೆ ಬೆಂಬಲ ನೀಡುವುದರ ಮೂಲಕ ಮಹಿಳಾ ಸಬಲೀಕರಣಕ್ಕೆ ಬೆಂಬಲ ನೀಡೋಣ ಎಂದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಮತಿ ಹೆಗ್ಡೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ನವ್ಯ, ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಜಿಲ್ಲಾ ವ್ಯವಸ್ಥಾಪಕಿ ಸೌಮ್ಯ, ತಾಲೂಕು ಒಕ್ಕೂಟದ ಅಧ್ಯಕ್ಷೆ ವಿಜಯ ಗಾಣಿಗ, ಪಂಚಾಯತ್ ಅಬಿವೃದ್ಧಿ ಅಧಿಕಾರಿ ನಾಗರತ್ನ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯತೀಶ್, ತಾಲೂಕು ವ್ಯವಸ್ಥಾಪಕ ಪ್ರಶಾಂತ್, ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರ ದೇವಾಡಿಗ, ಕೃಷ್ಣ ಪೂಜಾರಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ರತ್ನಾ, ತಾಲೂಕು ಸಿಬ್ಬಂದಿಗಳಾದ ಮಮತಾ, ಹರ್ಷಿತಾ, ಭವಾನಿ, ಯಮುನಾ, ಸುಷ್ಮಾ ಮಹೇಂದ್ರ, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ವಿದ್ಯಾ, ಸಂಜೀವಿನಿ ಒಕ್ಕೂಟ್ಟದ ಸ್ಥಳೀಯ ಸಂಪನ್ಮೂಲ ವ್ಯಕ್ತಿ ದೀಪಾ, ಶೈಲಜ, ಬೇಬಿ, ಪಶುಸಖಿ ರೇಖಾ, ಕೃಷಿ ಸಖಿ ಹರ್ಷಿತಾ, ಒಕ್ಕೂಟದ ಪದಾಧಿಕಾರಿಗಳಾದ ಮೂಕಾಂಬು, ಅನಿತಾ, ಅಶ್ವಿನಿ, ಮಾಲತಿ, ಹಾಗೂ ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು ಹಾಗೂ ಸಂಜೀವಿನಿ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮುಖ್ಯ ಪುಸ್ತಕ ಬರಹಗಾರರಾದ ನಯನ ನಿರೂಪಿಸಿ ವಂದಿಸಿದರು.