ನವದೆಹಲಿ, ಫೆ.13: ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಳ್ಳುವುದಾಗಿ ಘೋಷಿಸಿದ್ದು, ವಿರೋಧ ಪಕ್ಷದ ಮೈತ್ರಿಯನ್ನು ಕಡಿದುಕೊಂಡಿದೆ. ಹೊಸದಿಲ್ಲಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪಕ್ಷದ ಮುಖ್ಯಸ್ಥ ಜಯಂತ್ ಚೌಧರಿ, ತಮ್ಮ ಪಕ್ಷ ಜನರಿಗೆ ಏನಾದರೂ ಒಳ್ಳೆಯದನ್ನು ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದರು.
ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಮಾತನಾಡಿದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದರು. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಿಸಿದ ನಂತರ, ಇದು ಅವರ ಕುಟುಂಬಕ್ಕೆ ಮಾತ್ರವಲ್ಲದೆ ದೇಶದ ರೈತರು, ಯುವಕರು ಮತ್ತು ಬಡವರಿಗೆ ಗೌರವದ ಸಂಕೇತವಾಗಿದೆ ಎಂದು ಆರ್‌ಎಲ್‌ಡಿ ಮುಖ್ಯಸ್ಥರು ಹೇಳಿದ್ದಾರೆ. ಜಯಂತ್ ಚೌಧರಿಯವರ ಪಕ್ಷವು ವಿರೋಧ ಪಕ್ಷವಾದ ಐ.ಎನ್.ಡಿ.ಐ ಮೈತ್ರಿಕೂಟದ ಭಾಗವಾಗಿತ್ತು. ಅವರು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ.