Saturday, October 26, 2024
Saturday, October 26, 2024

ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಫೆ.13: ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣಗೊಳಿಸಿ ಮಾತನಾಡಿದರು. ‘ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ’ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ. ಫೆಬ್ರವರಿ 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಬಸವಾದಿ ಶರಣರ ವಚನಗಳು ಹಿಂದೆ, ಇಂದು ಹಾಗೂ ಮುಂದೆಯೂ ಪ್ರಸ್ತುತವಾಗಿರಲಿದೆ. ಬಸವಣ್ಣನವರ ಕಾರ್ಯಕ್ರಮಕ್ಕೆ ಯಾವ ಕಾರಣಕ್ಕೂ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ. ನುಡಿದಂತೆ ನಡೆದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯದಿಂದ ವಚನಗಳನ್ನು ರಚಿಸಿದರು. ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ರೀತಿಯಲ್ಲಿ ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಕಾಯಕ, ದಾಸೋಹವನ್ನು ಬೋಧಿಸಿದ ಬಸವಣ್ಣನವರು ಯಾರೂ ಕುಳಿತು ತಿನ್ನದೇ ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದರು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...

ರೈತರುಗಳು ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು, ಪಡೆದು ಸಮರ್ಪಕವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.26: ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ...

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು...
error: Content is protected !!