ಉಪ್ಪೂರು, ಫೆ.16: ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೊತ್ಸವ ಕಾರ್ಯಕ್ರಮ ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವೇದಿಕೆಯ ಸದಸ್ಯರು ಅಭಿನಯಿಸಿದ ತುಳು ಸಾಮಾಜಿಕ ಹಾಸ್ಯಮಯ ನಾಟಕ ‘ಅಜ್ಜಿಗ್ ಏರ್ಲಾ ಇಜ್ಜಿ’ ಯಶಸ್ವಿಯಾಗಿ ಪ್ರದರ್ಶನವಾಯಿತು. ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಾಘವೇಂದ್ರ ಭಟ್ ಉದ್ಘಾಟನೆ ನೆರವೇರಿಸಿದರು. ಶಾಸಕ ಯಶ್ಪಾಲ್ ಸುವರ್ಣ ಅವರು ಯುವ ವಿಚಾರ ವೇದಿಕೆಯ ಹಡಿಲು ಭೂಮಿ ಕೃಷಿಯ ಫಸಲನ್ನು ಫಲಾನುಭವಿಗಳಿಗೆ ವಿತರಣೆ ಮಾಡಿ ವೇದಿಕೆಯ ಕಾರ್ಯವನ್ನು ಶ್ಲಾಘಿಸಿದರು.
ಸ್ಪಂದನ ವಿಶೇಷ ಚೇತನ ಶಾಲೆ ಮುಖ್ಯಸ್ಥರಾದ ಉಮೇಶ್ ಹಾಗೂ ಜನಾರ್ಧನ ಇವರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ಸ್ಥಳೀಯ ವಿದ್ಯಾರ್ಥಿಗಳಾದ ಹರ್ಷಿತಾ, ಪ್ರಜ್ಞಾ, ರಿಯಾ, ಪ್ರೀತಮ್ ಇವರನ್ನು ಅಭಿನಂದಿಸಲಾಯಿತು. ದಾನಿಗಳಾದ ಪ್ರಶಾಂತ್ ಶೆಟ್ಟಿ ಅಮ್ಮುಂಜೆ ಇವರನ್ನು ಗೌರವಿಸಲಾಯಿತು. ಉಪ್ಪೂರು ವ್ಯ.ಸೇ.ಸ. ಸಂಘದ ಅಧ್ಯಕ್ಷರಾದ ರಮೇಶ್ ಎನ್ ಶೆಟ್ಟಿ, ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ ನ ಧರ್ಮಗುರುಗಳಾದ ರೆ.ಫಾ. ಜೋಸೆಫ್ ಮಚಾದೋ, ಉದ್ಯಮಿಗಳಾದ ರೋಯಲ್ ರತ್ನಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಿನ್ ರೋಚ್, ತುಳುನಾಡ ರಕ್ಷಣಾ ವೇದಿಕೆ ಮುಖಂಡ ಪ್ರಾಂಕಿ ಡಿಸೋಜ, ಮಾಹೆ ಮಣಿಪಾಲದ ಪ್ರಾಧ್ಯಾಪಕರಾದ ಡಾ. ಪ್ರಶಾಂತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬೆಳಿಗ್ಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಅವರು ರಾಜಶ್ರೀ ಮಸ್ಕರೇನಸ್, ರಮೇಶ್ ಕರ್ಕೇರ, ಸಂದೀಪ ನಾಯಕ್ ಅವರ ಉಪಸ್ಥಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಸಭಾ ಕಾರ್ಯಕ್ರಮದ ಮುಂಚಿತವಾಗಿ ಸ್ಥಳೀಯ ಅಂಗನವಾಡಿ ಮಕ್ಕಳ ನೃತ್ಯ ಹಾಗೂ ವೇದಿಕೆಯ ಸದಸ್ಯರಾದ, ನೃತ್ಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ಅವರ ನಿರ್ದೇಶನದಲ್ಲಿ ಸ್ಪಂದನ ವಿಶೇಷ ಚೇತನ ಶಾಲೆ ವಿದ್ಯಾರ್ಥಿಗಳು ಮನೋಜ್ಞವಾಗಿ ಅಭಿನಯಿಸಿದ ನೃತ್ಯ ರೂಪಕ ‘ಶ್ರೀ ರಾಮಾಯಣ ಕಥಾ ಸಾರಾಂಶ’ ಪ್ರದರ್ಶನವಾಯಿತು. ವೇದಿಕೆಯ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ ಸ್ವಾಗತಿಸಿ, ಅಶೋಕ್ ಹಾಗೂ ಸುರೇಶ್ ವಂದಿಸಿದರು. ಯೋಗೀಶ್ ಗಾಣಿಗ, ಸದಾಶಿವ ಕುಮಾರ್, ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.