Monday, November 25, 2024
Monday, November 25, 2024

ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ಪಾಲ್ ಸುವರ್ಣ ಆಗ್ರಹ

Date:

ಬೆಂಗಳೂರು, ಫೆ.19: ರಾಜ್ಯದಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015 ಕ್ಕಿಂತ ಪೂರ್ವದ ವಾಸಿಯಾಗಿರುವ ದಾಖಲೆಯನ್ನು ಒದಗಿಸುವ ನಿಯಮವನ್ನು 2019 ಕ್ಕೆ ಮಾರ್ಪಡಿಸಿ ಜಿಲ್ಲೆ ಹಾಗೂ ರಾಜ್ಯದ ಸಾವಿರಾರು ಅರ್ಹ ಬಡ ಕುಟುಂಬಗಳಿಗೆ ಅನುಕೂಲ ಮಾಡಿಕೊಡುವಂತೆ ಅಧಿವೇಶನದಲ್ಲಿ ಕಂದಾಯ ಸಚಿವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದರು. ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ಜಿಲ್ಲಾಧಿಕಾರಿಗಳು ಹೊರಡಿಸಿರುವ 50 ಸೆಂಟ್ಸ್ ಕ್ಕಿಂತ ಕಡಿಮೆ ವಿಸ್ತೀರ್ಣದಲ್ಲಿ 11 e ನಕ್ಷೆ ಪ್ರಕ್ರಿಯೆಯನ್ನು ಕೈಬಿಟ್ಟ ಆದೇಶದಿಂದ ಜಿಲ್ಲೆಯ ಜನತೆ ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ ತಕ್ಷಣ ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು.

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುವ ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರಿ ಖಾತೆಗಳನ್ನು ತೆರೆಯುವ ಮೂಲಕ ಆರ್ಥಿಕ ಸಹಕಾರ, ಪ್ರತಿ ಜಿಲ್ಲೆಯಲ್ಲಿ ಸಹಕಾರಿ ನ್ಯಾಯಾಲಯ ಸ್ಥಾಪನೆ ಹಾಗೂ ವಿಧಾನ ಪರಿಷತ್ತಿನಲ್ಲಿ 4 ಸ್ಥಾನಗಳನ್ನು ಸಹಕಾರಿ ಕ್ಷೇತ್ರದ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿ ಮುಂದಿನ ದಿನದಲ್ಲಿ ಸಹಕಾರ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸರಕಾರ ಕ್ರಮ ವಹಿಸುವಂತೆ ಸದನದಲ್ಲಿ ಪ್ರಸ್ತಾಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!