ಉಡುಪಿ, ಫೆ.20: ಸಂವಿಧಾನ ಜಾಗೃತಿ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಪಂಜಿನ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿದರು. ಎಸ್ಪಿ ಡಾ. ಅರುಣ್ ಕೆ., ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ತರಬೇತಿ ನಿರತ ಐ.ಪಿ.ಎಸ್ ಅಧಿಕಾರಿ ಹರ್ಷಂಪ್ರಿಯವದ, ಸಮಾಜ ಕಲ್ಯಾಣ ಅಧಿಕಾರಿ ಅನಿತಾ ಮಡ್ಲೂರು, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಅಜ್ಜರಕಾಡಿನ ಹುತಾತ್ಮರ ಸ್ಮಾರಕದಿಂದ ಬಸ್ ನಿಲ್ದಾಣದ ವರೆಗೆ ಡೊಳ್ಳು ಕುಣಿತದೊಂದಿಗೆ ನಡೆದ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಸಂವಿಧಾನ ಕುರಿತು ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು.
ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ
ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಪಂಜಿನ ಮೆರವಣಿಗೆ
Date: