Tuesday, November 26, 2024
Tuesday, November 26, 2024

ಪುತ್ತಿಗೆ ಶ್ರೀಪಾದರ ಧರ್ಮಪ್ರಚಾರ ಕಾರ್ಯಯೋಜನೆ ಅಭಿನಂದನೀಯ: ಶ್ರೀ ರವಿಶಂಕರ ಗುರೂಜಿ

ಪುತ್ತಿಗೆ ಶ್ರೀಪಾದರ ಧರ್ಮಪ್ರಚಾರ ಕಾರ್ಯಯೋಜನೆ ಅಭಿನಂದನೀಯ: ಶ್ರೀ ರವಿಶಂಕರ ಗುರೂಜಿ

Date:

ಉಡುಪಿ, ಫೆ.20: ದೇಶ ವಿದೇಶಗಳಲ್ಲಿ ನಿರಂತರವಾಗಿ ಸಂಚರಿಸುತ್ತಾ ಧರ್ಮಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿರುವ ಪುತ್ತಿಗೆ ಶ್ರೀಪಾದರ ಕಾರ್ಯಯೋಜನೆ ಅಭಿನಂದನೀಯವಾಗಿದೆ. ಆಹಾರಗಳ ನಿಯಮ, ಅನುಷ್ಠಾನಗಳ ಆಚರಣೆಗಳಿಂದ ಯತಿಧರ್ಮದ ಕಠಿಣ ಆಚರಣೆಯನ್ನು ನಡೆಸುತ್ತಾ ಶ್ರೀಕೃಷ್ಣ ಮಂದಿರಗಳನ್ನು ಪ್ರತಿಷ್ಠಾಪಿಸಿದ್ದಾರೆ. ಕಳೆದ ನಲವತ್ತು ವರ್ಷಗಳ ಸುದೀರ್ಘವಾದ ಆತ್ಮೀಯತೆ ನಮ್ಮಿಬ್ಬರಲ್ಲಿ ದೃಢವಾಗಿದೆ. ಅವರ ಪರ್ಯಾಯವು ಅತ್ಯಂತ ಯಶಸ್ವಿಯಾಗಿ ನೆರವೇರಲಿ ಹಾಗೂ ಕೋಟಿ ಗೀತಾ ಲೇಖನ ಯಜ್ಞದ ಕಾರ್ಯಕ್ರಮವು ನಿರ್ವಿಘ್ನವಾಗಿ ನಡೆಯಲಿ ಎಂದು ಅಂತಾರಾಷ್ಟ್ರೀಯ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ರವಿಶಂಕರ ಗುರೂಜಿ ಹೇಳಿದರು.

ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಆಮಂತ್ರಣದಂತೆ ಮಂಗಳವಾರ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಶ್ರೀ ರವಿಶಂಕರ ಗುರೂಜಿ ಅವರಿಗೆ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರು ಕಿರಿಯ ಪಟ್ಟದ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರು ಆತ್ಮೀಯವಾಗಿ ಬರಮಾಡಿಕೊಂಡರು. ಶ್ರೀಮಠದ ವಿದ್ವಾಂಸರು ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು. ದೇವರ ದರ್ಶನವನ್ನು ಮಾಡಿಸಿ ದೇವರ ಪ್ರಸಾದವನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀ ರವಿಶಂಕರ ಗುರೂಜಿ ಅವರಲ್ಲಿ ಶ್ರೀಕೃಷ್ಣನೇ ನಿಂತು ಅಮೋಘವಾದ ಕಾರ್ಯವನ್ನು ನಡೆಸುತ್ತಿದ್ದಾನೆ. ಅಪಾರ ಶಿಷ್ಯರನ್ನು ಹೊಂದಿರುವ ಶ್ರೀ ರವಿಶಂಕರ ಗುರೂಜಿ ಅವರು ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ನಮ್ಮ ಉಪಾಸ್ಯನಾದ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣ ದೇವರು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಿಸಲಿ ಎಂದು ಹಾರೈಸಿದರು. ಬಳಿಕ ಗೀತಾ ಮಂದಿರಕ್ಕೆ ಭೇಟಿ ನೀಡಿ ಗೀತಾರತಿಯನ್ನು ನೆರವೇರಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!