Sunday, September 22, 2024
Sunday, September 22, 2024

ಉಡುಪಿ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ

Date:

ಬೆಂಗಳೂರು, ಫೆ.22: ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು. ರಾಷ್ಟ್ರದಲ್ಲಿಯೇ ಶಿಕ್ಷಣ ವ್ಯವಸ್ಥೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಮಣಿಪಾಲ ಸಹಿತ ಉಡುಪಿ ಜಿಲ್ಲೆಯ ವಿವಿಧೆಡೆ ಡ್ರಗ್ಸ್ ಸೇವನೆಯಿಂದ ವಿದ್ಯಾರ್ಥಿಗಳು, ಯುವಜನತೆ ದಾರಿ ತಪ್ಪುತ್ತಿದ್ದಾರೆ. ಆದ್ದರಿಂದ ಪರಿಣಾಮಕಾರಿಯಾಗಿ ಡ್ರಗ್ಸ್ ದಂಧೆಯನ್ನು ನಿಯಂತ್ರಿಸಲು ಪ್ರತ್ಯೇಕ ವಿಶೇಷ ದಳವನ್ನು ರಚಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಉಡುಪಿ ಕ್ಷೇತ್ರದ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ 50 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ ಯಶ್ಪಾಲ್ ಸುವರ್ಣ, ಕ್ಷೇತ್ರದ ಕಡಲ್ಕೊರೆತ ತಡೆಗೋಡೆ ನಿರ್ಮಾಣ, ಕಿಂಡಿ ಅಣೆಕಟ್ಟು, ಸರಕಾರಿ ಶಾಲೆಗಳ ಅಭಿವೃದ್ಧಿ, ಹಾಸ್ಟೆಲ್ ಕಟ್ಟಡ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರುಗೊಳಿಸಿದರೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!