Saturday, October 26, 2024
Saturday, October 26, 2024

ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ: ಯಶ್ಪಾಲ್ ಸುವರ್ಣ

ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ: ಯಶ್ಪಾಲ್ ಸುವರ್ಣ

Date:

ಉಡುಪಿ, ಫೆ.27: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ 17 ವೃತ್ತಿಗಳ ಕುಶಲಕರ್ಮಿಗಳಿಗೆ ಸ್ವಉದ್ಯೋಗ ನಡೆಸಲು ನೀಡುತ್ತಿರುವ ವಿಶೇಷ ಪ್ರೋತ್ಸಾಹವನ್ನು ಸದುಪಯೋಗಪಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸಲು ಮುಂದಾಗೋಣ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಗಾರವನ್ನು ಮಣಿಪಾಲದಲ್ಲಿ ಉದ್ಘಾಟಿಸಿ ಮಾತನಾಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಸ್ವಉದ್ಯೋಗ ಆರಂಭಿಸಿ ಗ್ರಾಮೀಣ ಭಾಗದಲ್ಲಿ ಯುವಜನತೆಗೆ ಉದ್ಯೋಗ ಸೃಷ್ಟಿಸುವ ಜೊತೆಗೆ, ಇತರರಿಗೂ ಈ ಬಗ್ಗೆ ಮಾಹಿತಿ ನೀಡಿ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿ ಯೋಜನೆಯ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ತಿಳಿಸಿದರು.

ಸಮಾರಂಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ, ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗರಾಜ್, ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಕೇಂದ್ರದ ಮೆನೇಜರ್ ಮನೋಜ್ ಕುಮಾರ್, ಉದ್ಯಮಿ ವೆಂಕಟೇಶ್ ಶೇಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...

ರೈತರುಗಳು ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು, ಪಡೆದು ಸಮರ್ಪಕವಾಗಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.26: ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ...

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...
error: Content is protected !!