ಬೆಂಗಳೂರು, ಫೆ. 28: ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಎಫ್. ಎಸ್.ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು.
ಕೂಗುವವರಿಗೆ ವಿಧಾನಸೌಧ ಆದರೇನು? ಬೇರೆ ಎಲ್ಲಾದರೇನು? ಅಪರಾಧ ಅಪರಾಧವೇ. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಅಂಥವರ ಮೇಲೆ ಕಠಿಣ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.