ಉಡುಪಿ, ಫೆ.29: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ ನೋಂದಾಯಿಸಲಾಗುತ್ತಿದೆ. ಕಾರ್ಮಿಕ ಇಲಾಖೆ ಮತ್ತು ಆಹಾರ ಇಲಾಖೆಯ ವತಿಯಿಂದ ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿಯಾಗಿ ಪಡಿತರ ಚೀಟಿ ಹೊಂದಿರದ ಅಸಂಘಟಿತ ಕಾರ್ಮಿಕರಿಗೆ ಪಡಿತರ ಚೀಟಿಯನ್ನು ಒದಗಿಸುವ ಸಲುವಾಗಿ ಮಾರ್ಚ್ 4 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬನ್ನಂಜೆ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕ್ಯಾಂಪ್ ಅನ್ನು ನಡೆಸಲಿದ್ದು, ಅಗತ್ಯ ದಾಖಲೆಗಳಾದ ಇ-ಶ್ರಮ್, ಆಧಾರ್ ಕಾರ್ಡ್ ಹಾಗೂ ಆದಾಯ ಪ್ರಮಾಣ ಪತ್ರದೊಂದಿಗೆ ಆಗಮಿಸಿ ಸದರಿ ಕ್ಯಾಂಪ್‌ನ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.
ಮಾ.4: ಪಡಿತರ ಚೀಟಿ ವಿತರಣೆಗಾಗಿ ಕ್ಯಾಂಪ್ ಆಯೋಜನೆ
ಮಾ.4: ಪಡಿತರ ಚೀಟಿ ವಿತರಣೆಗಾಗಿ ಕ್ಯಾಂಪ್ ಆಯೋಜನೆ
Date: