Friday, October 18, 2024
Friday, October 18, 2024

ರಥಬೀದಿ ಸರ್ಕಾರಿ ಕಾಲೇಜಿಗೆ ಸಂವಿಧಾನ ಜಾಗೃತಿ ತೇರು

ರಥಬೀದಿ ಸರ್ಕಾರಿ ಕಾಲೇಜಿಗೆ ಸಂವಿಧಾನ ಜಾಗೃತಿ ತೇರು

Date:

ಮಂಗಳೂರು, ಫೆ.29: ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ ಜಾಥಾದ ತೇರು ಗುರುವಾರ ಡಾ. ಪಿ. ದಯಾನಂದ ಪೈ-ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಪ್ರಭಾರ ಪ್ರಾಂಶುಪಾಲ ಡಾ. ನವೀನ್ ಕೊಣಾಜೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂವಿಧಾನದ ಪೀಠಿಕೆಯ ಭಾಗವನ್ನು ಪ್ರತಿಜ್ಞಾ ರೂಪದಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸಿದರು. ಸಂವಿಧಾನ ಜಾಥಾದ ತೇರಿನ ಉಸ್ತುವಾರಿ ಗಿರೀಶ್ ನಾವಡ ಅವರು ಮಾತನಾಡಿ, ಮೊದಲಿನ ದಿನಗಳಲ್ಲಿ ಬೇರೆಯವರು ನಮ್ಮನ್ನು ಆಳುತ್ತಿದ್ದರು. ಆದರೆ ಸ್ವಾತಂತ್ರ‍್ಯದ ನಂತರ ಬಂದಂತಹ ಸಂವಿಧಾನದಿಂದಾಗಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಜೆಗಳು ಪ್ರಭುಗಳಾಗಬೇಕು. ಈ ನಿಟ್ಟಿನಲ್ಲಿ ತಮ್ಮ ಹಕ್ಕನ್ನು ಚಲಾಯಿಸುವ ಸಂದರ್ಭದಲ್ಲಿ ಇನ್ನೊಬ್ಬರ ಹಕ್ಕಿಗೆ ಧಕ್ಕೆಯಾಗದ ರೀತಿಯಲ್ಲಿ ಹಕ್ಕನ್ನು ಚಲಾಯಿಸುವ ಶಕ್ತಿಯನ್ನು ನೀಡಿದ್ದು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ. ಇದು ಸುದೀರ್ಘವಾಗಿ ರಾಷ್ಟ್ರವನ್ನು ಸುಭಿಕ್ಷೆಗೊಳಿಸಬೇಕು ಎಂಬುವುದನ್ನು ನಮಗೆ ತಿಳಿಸಿಕೊಟ್ಟಿದೆ ಎಂದು ಹೇಳಿದರು.

ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ನಾಗಪ್ಪ ಗೌಡ, ರಸಾಯನಶಾಸ್ತ್ರದ ಸಹ ಪ್ರಾಧ್ಯಾಪಕ ಡಾ. ಸುಧಾಕರನ್ ಟ., ಗಣಿತಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಜೆಫ್ರಿ ರೋಡ್ರಿಗಸ್, ಗ್ರಂಥಪಾಲಕಿ ಉಮಾ ಎ.ಬಿ., ಸಮಾಜಕಾರ್ಯ ವಿಭಾಗದ ನಿತಿನ್ ಚೋಳ್ವೇಕರ್, ಕಛೇರಿ ಅಧೀಕ್ಷಕ ರಮೇಶ್, ಕಾಲೇಜಿನ ಪ್ರಾಧ್ಯಾಪಕರುಗಳು, ಉಪನ್ಯಾಸಕರುಗಳು, ಬೋಧಕೇತರ ಸಿಬ್ಬಂದಿಗಳು, ಕಾಲೇಜು ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ಬಿ.ಎ ವಿದ್ಯಾರ್ಥಿಗಳಿಂದ ನಾಡಗೀತೆ, ರಾಷ್ಟ್ರನಮನ ಹಾಗೂ ಜಾಥಾದ ಸದಸ್ಯರಿಂದ ಕಿರು ಪ್ರಹಸನ ಕಾರ್ಯಕ್ರಮವು ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...
error: Content is protected !!