Tuesday, November 26, 2024
Tuesday, November 26, 2024

ಬಸವಣ್ಣನ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬಸವಣ್ಣನ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಫೆ.29: ಹಸಿವಿನ ಜೊತೆಗೆ ದೇಶವನ್ನು ಅನಕ್ಷರತೆ, ಅನಾರೋಗ್ಯ ಮತ್ತು ನಿರುದ್ಯೋಗ ಮುಕ್ತ ಮಾಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ಗುರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿಂದಿನ ಸರ್ಕಾರದ ಕಾಲದಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್ ಕಾರ್ಯಕ್ರಮಗಳೆಲ್ಲವೂ ಈ ಗುರಿಯೆಡೆಗೆ ಕರ್ನಾಟಕವನ್ನು ಕೊಂಡೊಯ್ಯುವ ಪ್ರಯತ್ನದಲ್ಲಿ ಯಶಸ್ವಿ ಆಗಿವೆ. ನಮ್ಮ ಈಗಿನ ಸರ್ಕಾರದ ಗ್ಯಾರಂಟಿ ಯೋಜನೆಗಳ ಗುರಿ ಕೂಡಾ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ.

ಬಸವಣ್ಣನ ಕಾಯಕ-ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆ. ನಮ್ಮ ಯೋಜನೆಗಳಲ್ಲಿ ರಾಜಕೀಯ ಲಾಭದ ಉದ್ದೇಶ ಇಲ್ಲ, ನಮ್ಮ ಯೋಜನೆಗಳ ಉದ್ದೇಶ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆ. ರಾಜ್ಯದ ಯಾವುದೇ ಮನೆಯಲ್ಲಿ ಹಸಿವು, ಅನಾರೋಗ್ಯ, ಅನಕ್ಷರತೆ ಮತ್ತು ನಿರುದ್ಯೋಗದಿಂದ ಬಳಲುವರು ಇರದಂತೆ ನೋಡಿಕೊಳ್ಳುವುದೇ ನಮ್ಮ ಆಶಯ ಮತ್ತು ಬದ್ಧತೆ. ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿ ಮಾಡಿದೆ. 2013ರ ಬಸವ ಜಯಂತಿಯ ದಿನವೇ ಜಾರಿಗೆ ಬಂದಿರುವ ಅನ್ನಭಾಗ್ಯ ಯೋಜನೆ ಬಸವಣ್ಣನವರ ದಾಸೋಹದಿಂದ ಪ್ರೇರಿತವಾಗಿರುವುದು. ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿಗೆ ಹೆಚ್ಚಳ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!