ನವದೆಹಲಿ, ಫೆ.29: ಒಟ್ಟು 75,021 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ವ್ಯವಸ್ಥೆಯನ್ನು ಸ್ಥಾಪಿಸಲು ಪಿಎಂ-ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ಗುರುವಾರ ನವದೆಹಲಿಯಲ್ಲಿ ನಡೆದ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಒಂದು ಕೋಟಿ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ಸಿಗಲಿದೆ ಮತ್ತು ಫಲಾನುಭವಿಗಳು 15,000 ರೂಪಾಯಿ ಆದಾಯವನ್ನು ಗಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಈ ಯೋಜನೆಯ ಮೂಲಕ, ಕುಟುಂಬಗಳು ವಿದ್ಯುತ್ ಬಿಲ್‌ಗಳನ್ನು ಉಳಿಸಲು ಮತ್ತು ಹೆಚ್ಚುವರಿ ವಿದ್ಯುತ್ ಅನ್ನು ಡಿಸ್ಕಾಂಗಳಿಗೆ ಮಾರಾಟ ಮಾಡುವ ಮೂಲಕ ಹೆಚ್ಚುವರಿ ಆದಾಯವನ್ನು ಗಳಿಸಲು ಸಾಧ್ಯವಾಗುತ್ತದೆ. ಪ್ರ
ಸ್ತಾವಿತ ಯೋಜನೆಯು ವಸತಿ ವಲಯದಲ್ಲಿ ಮೇಲ್ಛಾವಣಿ ಸೌರ ವ್ಯವಸ್ಥೆಯ ಮೂಲಕ 30 ಗಿಗಾವ್ಯಾಟ್ ಸೌರ ಸಾಮರ್ಥ್ಯದ ಸೇರ್ಪಡೆಗೆ ಕಾರಣವಾಗುತ್ತದೆ. ಈ ಯೋಜನೆಯು ಉತ್ಪಾದನೆ, ಲಾಜಿಸ್ಟಿಕ್ಸ್, ಪೂರೈಕೆ ಸರಪಳಿ, ಮಾರಾಟ, ಸ್ಥಾಪನೆ ಮತ್ತು ಇತರ ಸೇವೆಗಳಲ್ಲಿ ಸುಮಾರು 17 ಲಕ್ಷ ನೇರ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.