Saturday, October 19, 2024
Saturday, October 19, 2024

ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ಬಸ್ರೂರು ರಾಜೀವ ಶೆಟ್ಟಿ

ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ಬಸ್ರೂರು ರಾಜೀವ ಶೆಟ್ಟಿ

Date:

ಉಡುಪಿ, ಮಾ.1: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳಿಸಿಕೊಂಡು ಸಾರ್ವಜನಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು. ಅವರು ಶುಕ್ರವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಬಿರದಲ್ಲಿ ಸಂಪೂರ್ಣವಾಗಿ ಭಾಗವಹಿಸಿ ವ್ಯಕ್ತಿತ್ವ ವಿಕಾಸನದೊಂದಿಗೆ, ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದ ಅವರು ಜೀವನದಲ್ಲಿ ಕಲಿಕೆಯು ಅತ್ಯಂತ ಪ್ರಮುಖ ವಿಚಾರವಾಗಿದ್ದು ಪ್ರತಿ ನಿತ್ಯವೂ ಹೊಸ ವಿಚಾರಗಳನ್ನು ಕಲಿಯುವುರೊಂದಿಗೆ ಗುರಿಯತ್ತ ಸಾಗಬೇಕು ಎಂದರು. ವಿಚಾರ ವಿನೀಮಯ ಹಾಗೂ ಜೀವನದಲ್ಲಿ ಧನಾತ್ಮಕ ಮನೋಭಾವವನ್ನು ಬೆಳಿಸಿಕೊಂಡು ಸಮಾಜಕ್ಕೆ ಕೊಡುಗೆಯನ್ನು ನೀಡುವುದರೊಂದಿಗೆ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದರು.

ಪೌರಾಯುಕ್ತ ರಾಯಪ್ಪ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಆಳವಡಿಸಿಕೊಂಡಾಗ ಉತ್ತಮ ಬದುಕನ್ನು ರೂಪಿಸಲು ಸಾಧ್ಯವಾಗುತ್ತದೆ, ಯುವ ಜನತೆಯು ಸಮಾಜದಲ್ಲಿ ಒಳ್ಳೆಯ ವಿಚಾರಗಳನ್ನು ಸ್ಪಿಕರಿಸಬೇಕು ಎಂದರು. ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಭಾಸ್ಕರ ಶೆಟ್ಟಿ ಮಾತನಾಡುತ್ತಾ, ಯುವಜನತೆಯು ಆದರ್ಶ ವ್ಯಕ್ತಿಗಳ ಜೀವನ ಮೌಲ್ಯವನ್ನು ತಮ್ಮ ಬದುಕಿನಲ್ಲಿ ಅನುಸರಿಸುವುದರೊಂದಿಗೆ ಜೀವನದಲ್ಲಿ ಯಾವುದೇ ಕಾರ್ಯಗಳನ್ನು ಬದ್ದತೆಯಿಂದ ನಿರ್ವಹಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿ ನಿಕಟಪೂರ್ವ ರಾಜ್ಯ ಎನ್ ಎಸ್.ಎಸ್ ಸಂಪರ್ಕಾಧಿಕಾರಿ ಡಾ.ಗಣನಾಥ ಶೆಟ್ಟಿ ಎಕ್ಕಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಖಜಾಂಜಿ ರಮಾದೇವಿ , ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಖಜಾಂಜಿ ಚಂದ್ರಶೇಖರ್ , ವಿಜ್ಞಾನ ನಿಕಾಯದ ಡೀನ್ ಶ್ರೀಧರ್ ಪ್ರಸಾದ್ ಕೆ. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಾಣಿ ಆರ್ ಬಲ್ಲಾಳ್, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ. ನಿಕೇತನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮ, ಸಾಫಲ್ಯ ಟ್ರಸ್ಟ್ ನ ನಿರ್ದೇಶಕಿ ನಿರುಪಮ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ.ಡಿ ಸ್ವಾಗತಿಸಿ, ಅಮೃತ ಮತ್ತು ಚೈತ್ರ ನಿರೂಪಿಸಿ, ಪ್ರೀತಿ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಿನಿ‌ ಇಡ್ಲಿ, ದೋಸೆ ಸಿದ್ಧ ಹಿಟ್ಟು ಶೀಘ್ರದಲ್ಲಿ ಮಾರುಕಟ್ಟೆಗೆ

ಬೆಂಗಳೂರು, ಅ.18: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌...

ಪಿಡಿಒ ಪರೀಕ್ಷೆ: ಉಚಿತ ತರಬೇತಿ ಕಾರ್ಯಾಗಾರ

ಉಡುಪಿ, ಅ.19: ಕೆ.ಪಿ.ಎಸ್.ಸಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ (P.D.O.)...

ಅ.23: ಉದ್ಯಾವರ ಯುನೈಟೆಡ್ ಟೊಯೋಟಾದಲ್ಲಿ ನೇರ ಸಂದರ್ಶನ

ಉಡುಪಿ, ಅ.19: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್...

ಅ.21: ಪೊಲೀಸ್ ಹುತಾತ್ಮರ ದಿನಾಚರಣೆ

ಉಡುಪಿ, ಅ.19: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮರ...
error: Content is protected !!