Monday, November 25, 2024
Monday, November 25, 2024

ಮಣಿಪಾಲ ಕೈಗಾರಿಕಾ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಬದ್ಧ

ಮಣಿಪಾಲ ಕೈಗಾರಿಕಾ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಬದ್ಧ

Date:

ಮಣಿಪಾಲ, ಮಾ.2: ಉಡುಪಿ ಜಿಲ್ಲೆಯ ಪ್ರಮುಖ ಕೈಗಾರಿಕಾ ಪ್ರದೇಶವಾಗಿರುವ ಮಣಿಪಾಲ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಕೈಗಾರಿಕೋದ್ಯಮಿಗಳಿಗೆ ಶಾಸಕನ ನೆಲೆಯಲ್ಲಿ ಸಹಕಾರ ನೀಡಲು ಬದ್ಧ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಉಡುಪಿ ನಗರಸಭೆಯ ಎಸ್. ಎಫ್. ಸಿ. ನಿಧಿಯಿಂದ 70 ಲಕ್ಷ ವೆಚ್ಚದಲ್ಲಿ ಮಂಜೂರಾದ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಅವರು ಮಾತನಾಡಿದರು. ಸುಮಾರು 10 ಕೋಟಿ ವೆಚ್ಚದಲ್ಲಿ ವ್ಯವಸ್ಥಿತ ಚರಂಡಿ, ರಸ್ತೆ ಸಹಿತ ಮೂಲ ಸೌಕರ್ಯಕ್ಕೆ ಮಾಸ್ಟರ್ ಪ್ಲಾನ್ ರಚಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮಣಿಪಾಲ ವಾರ್ಡ್ ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ಜಿಲ್ಲಾ ಸಣ್ಣ ಕೈಗಾರಿಕೆ ಸಂಘದ ಅಧ್ಯಕ್ಷರಾದ ಹರೀಶ್ ಕುಂದರ್, ಪ್ರಮುಖರಾದ ಚಿತ್ತರಂಜನ್ ಭಟ್, ರಿಷಿಕೇಶ್ ಹೆಗ್ಡೆ, ವಲ್ಲಭ್ ಭಟ್, ವಿಶ್ವನಾಥ ಭಟ್, ಜ್ಞಾನಾನಂದ, ವಿನ್ಸೆಂಟ್ ಪಿಂಟೋ, ಕೃಷ್ಣಪ್ರಸಾದ್ ಶೆಟ್ಟಿ, ಸ್ಥಳೀಯರಾದ ನಿತಿನ್ ಪೈ, ಪ್ರಥ್ವಿರಾಜ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!