ಮಲ್ಪೆ, ಮಾ.5: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಮಾರ್ಚ್ 7 ರಿಂದ 10 ರ ವರಗೆ ಮಲ್ಪೆ ಬೀಚ್ ನಲ್ಲಿ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನೆಡೆಯಲಿದೆ.
ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗ್ರಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಫಾಸ್ಟ್ ಫುಡ್ ಇತ್ಯಾದಿ ಉತ್ಪನ್ನಗಳು ಲಭ್ಯವಿದೆ ಹಾಗೂ ಪ್ರತಿ ದಿನ ಸಂಜೆ 6 ಗಂಟೆಯಿಂದ 9 ಗಂಟೆ ವರೆಗೆ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆಡೆಯಲಿದೆ. ಸಾರ್ವಜನಿಕರು ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಹಾಗೂ ಮಹಿಳೆಯರ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕೆಂದು ಜಿಲ್ಲಾ ಪಂಚಾಯತ್ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.