ಸಂಗಾರೆಡ್ಡಿ, (ತೆಲಂಗಾಣ) ಮಾ.5: ತೆಲಂಗಾಣದ ಸಂಗಾರೆಡ್ಡಿಯಲ್ಲಿ 7,200 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳು ರಸ್ತೆ, ರೈಲು, ಪೆಟ್ರೋಲಿಯಂ, ವಾಯುಯಾನ ಮತ್ತು ನೈಸರ್ಗಿಕ ಅನಿಲದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕೇಂದ್ರ ಸರ್ಕಾರವು ತೆಲಂಗಾಣ ಅಭಿವೃದ್ಧಿಗೆ ನೆರವು ನೀಡಲು ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯಗಳ ವಿಕಾಸದ ಮೂಲಕ ರಾಷ್ಟ್ರ ವಿಕಾಸದ ಮಂತ್ರವನ್ನು ತಾನು ನಂಬುತ್ತೇನೆ ಎಂದರು. ತೆಲಂಗಾಣ ರಾಜ್ಯಪಾಲ ಡಾ. ತಮಿಳಿಸೈ ಸೌಂದರರಾಜನ್, ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ತೆಲಂಗಾಣದಲ್ಲಿ 7,200 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ತೆಲಂಗಾಣದಲ್ಲಿ 7,200 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
Date: