ಉಡುಪಿ, ಮಾ.7: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹಣೆ ಅತೀ ಕಡಿಮೆಯಾಗುತ್ತಿದ್ದು, ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ, ಉಡುಪಿ ನಗರಸಭೆಯ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸದೇ ಅಂದರೆ ವಾಹನವನ್ನು ತೊಳೆಯಲು, ಗಿಡಗಳಿಗೆ ನೀರನ್ನು ಬಿಡುವುದು ಕಂಡುಬಂದಲ್ಲಿ, ಸದರಿಯವರ ನೀರಿನ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೇ ಕಡಿತಗೊಳಿಸಿ ದಂಡ ವಿಧಿಸಲಾಗುವುದು. ಮಿತವಾದ ಬಳಕೆಗೆ ಆದ್ಯತೆ ನೀಡಿ. ನೀರಿನ ಅಭಾವ ಇರುವ ಈ ಸಮಯದಲ್ಲಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹಣೆಯಲ್ಲಿ ಕುಸಿತ
ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹಣೆಯಲ್ಲಿ ಕುಸಿತ
Date: