ನವದೆಹಲಿ, ಮಾ.8: ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಬಳಿಕ ಮಾತನಾಡಿದ ಸುಧಾ ಮೂರ್ತಿ ಅವರು, ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ನನ್ನ ಸೌಭಾಗ್ಯ ಮತ್ತು ಗೌರವವಾಗಿದೆ. ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅವಕಾಶಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಪರೋಪಕಾರಾರ್ಥಂ ಇದಂ ಶರೀರಂ ಎಂದು ಎಕ್ಸ್ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಪ್ರಧಾನಿ ಶುಭಾಶಯ: ರಾಜ್ಯಸಭೆಗೆ ಸುಧಾ ಮೂರ್ತಿ ಅವರು ನಾಮನಿರ್ದೇಶನಗೊಂಡಿರುವುದು ಹೆಮ್ಮೆಯ ಸಂಗತಿ. ಸಮಾಜ ಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಜಿ ಅವರ ಕೊಡುಗೆಗಳು ಅಪಾರ ಮತ್ತು ಸ್ಪೂರ್ತಿದಾಯಕವಾಗಿವೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲ ಸಾಕ್ಷಿಯಾಗಿದೆ, ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸುಧಾ ಮೂರ್ತಿ ಅವರಿಗೆ ಶುಭ ಹಾರೈಸಿದ್ದಾರೆ.