ಬೆಂಗಳೂರು, ಮಾ.10: ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆಯ ವಿಕಸಿತ ಭಾರತ ಎಲ್.ಇ.ಡಿ ಪ್ರಚಾರ ವಾಹನಗಳಿಗೆ ಹಾಗೂ ವಿಕಸಿತ ಭಾರತ ಸಂಕಲ್ಪ ಪತ್ರ ಅಭಿಯಾನದ ವಾಹನಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಾಮಾನ್ಯ ಪ್ರಜೆಯ ಭಾವನೆಗಳನ್ನು ಆಧರಿಸಿ ರೂಪಿಸುವುದು ಬಿಜೆಪಿ ಪ್ರಣಾಳಿಕೆ ಆಗಬೇಕು, ಅದು ದೇಶದ ಅಭಿವೃದ್ಧಿಯ ದಿಕ್ಸೂಚಿ ಆಗಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಕಾಳಜಿಯಾಗಿದ್ದು, ವಿಕಸಿತ ಭಾರತಕ್ಕಾಗಿ ಬಿಜೆಪಿ ಸಂಕಲ್ಪ ಪತ್ರ ಅಭಿಯಾನವನ್ನು ಆರಂಭಿಸಿದ್ದು ಅತ್ಯಂತ ಸರಳವಾಗಿ ಮಿಸ್ ಕಾಲ್ ಕೊಡುವ ಮೂಲಕ ಹಾಗೂ ವಾಯ್ಸ್ ರೆಕಾರ್ಡ್ ಮೂಲಕವೂ ಈ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.
9090902024 ಗೆ ಮಿಸ್ ಕಾಲ್ ಕೊಡುವ ನಂತರ ಬರುವ ಲಿಂಕ್ ಅನ್ನು ಬಳಸಿ, ನಮೋ ಆಪ್ ಮೂಲಕ ಅಥವಾ ವಿಕಸಿತ ಭಾರತದ ಯಾತ್ರೆಯ ರಥ ತೆರಳುವ ಸ್ಥಳಗಳಲ್ಲಿ ಇರಿಸಲಾಗುವ ಪೆಟ್ಟಿಗೆಗಳಲ್ಲಿ ವಿವಿಧ ವರ್ಗಗಳ ಜನರೆಲ್ಲರೂ ತಮ್ಮ ಅಭಿಪ್ರಾಯಗಳನ್ನು ಬರೆದು ತಿಳಿಸಬೇಕೆಂದು ಹೇಳಿದರು.
ವಿರೋಧ ಪಕ್ಷದ ನಾಯಕ ಾಅರ್. ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ಭೈರತಿ ಬಸವರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಸ್. ನಂದೀಶ ರೆಡ್ಡಿ, ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರೀ ಮತ್ತು ನಿವೃತ್ತ ಐ.ಎ.ಎಸ್. ಅಧಿಕಾರಿ ಸಿ. ಸೋಮಶೇಖರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ದಕ್ಷಿಣ ಜಿಲ್ಲಾ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಕೆ.ರಾಮಮೂರ್ತಿ, ನಗರ ಜಿಲ್ಲಾಧ್ಯಕ್ಷರಾದ ಸಪ್ತಗಿರಿಗೌಡ ಮುಂತಾದವರು ಉಪಸ್ಥಿತರಿದ್ದರು.